ಕೊಪ್ಪಳ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ರೈತ ಹಾಗೂ ಎತ್ತು ಮೃತಪಟ್ಟ ಘಟನೆ ತಾವರಗೇರಾ ಸಮೀಪದ ಚಿಕ್ಕತೆಮ್ಮಿನಾಳ ಗ್ರಾಮದಲ್ಲಿ ನಡೆದಿದೆ.
ಬಸವರಾಜ(38) ಮೃತಪಟ್ಟ ರೈತ ಎಂದು ಹೇಳಲಾಗಿದೆ. ಜಮೀನಿನಲ್ಲಿ ಉಳುಮೆ ಮಾಡುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿದ್ದು, ವಿದ್ಯುತ್ ಪ್ರವಹಿಸಿ ಎತ್ತು ಹಾಗೂ ರೈತ ಬಸವರಾಜ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಸಕ ದೊಡ್ಡನಗೌಡ ಪಾಟೀಲ ಕೂಡ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.
Laxmi News 24×7