Breaking News

ಸರ್ಕಾರಿ ನೌಕರರಿಗೆ ಹೊಸ ಭರಸೆ ಕೊಟ್ಟ ಡಿಸಿಎಂ

Spread the love

ಬೆಂಗಳೂರು, ಜೂನ್‌ 17: ಕರ್ನಾಟಕದ ಸರ್ಕಾರಿ ನೌಕರರು, ನಿವೃತ್ತ ನೌಕರರು ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿಯನ್ನು ಸರ್ಕಾರ ಯಾವಾಗ ಜಾರಿಗೊಳಿಸುತ್ತದೆ? ಎಂದು ಕಾಯುತ್ತಿದ್ದಾರೆ. ಸರ್ಕಾರ ಈ ವಿಚಾರದಲ್ಲಿ ನೌಕರರಿಗೆ ಹಲವು ಭರವಸೆಗಳನ್ನು ನೀಡುತ್ತಲೇ ಇದೆ.

7th Pay Commission; ಸರ್ಕಾರಿ ನೌಕರರಿಗೆ ಹೊಸ ಭರಸೆ ಕೊಟ್ಟ ಡಿಸಿಎಂ ಡಿಕೆಶಿ

ಲೋಕಸಭೆ ಚುನಾವಣೆ 2024, ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಮುಕ್ತಾಯಗೊಂಡಿದೆ. ನೀತಿ ಸಂಹಿತೆ ತೆರವಾದ ಬಳಿಕ ಕರ್ನಾಟಕ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯನ್ನು ಸಹ ನಡೆಸಲಾಗಿದೆ. ಆದರೆ ಸರ್ಕಾರಿ ನೌಕರರಿಗೆ ಸಹಿಸುದ್ದಿ ಸಿಕ್ಕಿಲ್ಲ.

ಈಗ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸರ್ಕಾರಿ ನೌಕರರಿಗೆ ಮತ್ತೊಂದು ಭರವಸೆ ನೀಡಿದ್ದಾರೆ. ಜೂನ್ 15ರಂದು ಅವರು ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಬೆಂಗಳೂರು ನಗರ, ರಾಮನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಡಿ. ಕೆ. ಶಿವಕುಮಾರ್ ಭರವಸೆ ಏನು? ಡಿ. ಕೆ. ಶಿವಕುಮಾರ್ ಮಾತನಾಡಿ, “ಸರ್ಕಾರಿ ನೌಕರರ ಸಮಸ್ಯೆಗಳ ಅರಿವು ಇದೆ. ಮಂತ್ರಿಗಳು ಸರ್ಕಾರದ ಸೇವಕರೇ. ಸಮಸ್ಯೆಎಗ ಪರಿಹಾರ ಕಂಡುಕೊಳ್ಳಲು ಎಲ್ಲರೂ ಪ್ರಾಮಾಣಿಕವಾಗಿ ಪ್ರಯತ್ನಿಸೋಣ” ಎಂದು ಹೇಳಿದರು.


Spread the love

About Laxminews 24x7

Check Also

ಬೆಂಗಳೂರಲ್ಲಿ ಮುಂಬೈ ಮಾದರಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಿ: ಡಿಸಿಎಂ ಸೂಚನೆ

Spread the love ಬೆಂಗಳೂರು: ಮುಂಬೈ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಬಿಎ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ