Breaking News

ಪೋಕ್ಸೋ ಕೇಸ್ : ‘CID’ ವಿಚಾರಣೆಗೆ ಹಾಜರಾದ B. S. Y.

Spread the love

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ಸಿಐಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.

ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ. 12 ರಂದು ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪ ಅವರಿಗೆ ಸಿಐಡಿಯಿಂದ ನೋಟಿಸ್ ನೀಡಲಾಗಿತ್ತು.

ಆದರೆ, ಯಡಿಯೂರಪ್ಪ ವಿಚಾರಣೆಗೆ ಗೈರು ಹಾಜರಾಗಿದ್ದರು. ಪಕ್ಷದ ಪೂರ್ವ ನಿಗದಿತ ಕಾರ್ಯಕ್ರಮ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವುದರಿಂದ ಜೂ. 17ರಂದು ವಿಚಾರಣೆಗೆ ಹಾಜರಾಗುವುದಾಗಿ ಕೋರಿದ್ದರು.ಇಂದು .ಎಸ್. ಯಡಿಯೂರಪ್ಪ ಸೋಮವಾರ ಸಿಐಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.

ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿದ್ದ ಮಾಜಿ ಸಿಎಂ ಯಡಿಯೂರಪ್ಪ ಹೈಕೋರ್ಟ್ ಗೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

ನಂತರ ಕೋರ್ಟ್ ಬಂಧಿಸಿದಂತೆ ಆದೇಶ ಹೊರಡಿಸಿತ್ತು. ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು.

ಈ ವಿಚಾರವಾಗಿ ಯಡಿಯೂರಪ್ಪಗೆ ಪೊಲೀಸರು ನೋಟಿಸ್ ನೀಡಿ ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದರು. ಆದರೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿರಲಿಲ್ಲ. ನಂತರ ತಮ್ಮ ವಿರುದ್ಧದ ಕೇಸ್ ರದ್ದು ಮಾಡುವಂತೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಹಾಗೂ ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನಿಗೆ ಕೂಡ ಅವರು ಅರ್ಜಿ ಸಲ್ಲಿಸಿದ್ದರು.


Spread the love

About Laxminews 24x7

Check Also

ಮಂಡ್ಯ, ಮದ್ದೂರಿನಲ್ಲಿ ಮುರುಡೇಶ್ವರ ರೈಲು ನಿಲುಗಡೆಗೆ ಕೋರಿಕೆ; ಅಶ್ವಿನಿ ವೈಷ್ಣವ್‌ರಿಂದ ಸಕಾರಾತ್ಮಕ ಪ್ರತಿಕ್ರಿಯೆ

Spread the love ನವದೆಹಲಿ: ಬೆಂಗಳೂರು, ಮಂಡ್ಯ, ಮೈಸೂರು ರೈಲು ಮಾರ್ಗದ ವಿವಿಧ ಬೇಡಿಕೆಗಳ ಬಗ್ಗೆ ಕೇಂದ್ರದ ಬೃಹತ್ ಕೈಗಾರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ