Breaking News
Home / ರಾಜಕೀಯ / ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ.: ಬಿ.ಸಿ.ಪಾಟೀಲ್ ಆಕ್ರೋಶ

ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ.: ಬಿ.ಸಿ.ಪಾಟೀಲ್ ಆಕ್ರೋಶ

Spread the love

ಹಾವೇರಿ: ರಾಜ್ಯ ಸರಕಾರ ಬೆಲೆ ಏರಿಕೆ ಮಾಡಿದ್ದು ದೊಡ್ಡ ಆಘಾತವಾಗಿದೆ. ನೇರವಾಗಿ ರಾಬರಿ ಮತ್ತು ಡಕಾಯತಿ ಇದು. ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ. ಸಾರ್ವಜನಿಕರ ಜೇಬಿಗೆ ಸರಕಾರ ಕತ್ತರಿ ಹಾಕಿದೆ. ಗ್ಯಾರಂಟಿ ಕೊಟ್ಟರೂ ಜನರು ಕೈ ಹಿಡಿಯಲಿಲ್ಲ ಎಂದು ಹತಾಶರಾಗಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ ಹರಿಹಾಯ್ದರು.

Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ.: ಬಿ.ಸಿ.ಪಾಟೀಲ್ ಆಕ್ರೋಶ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,187 ಕೋಟಿ ಭ್ರಷ್ಟಾಚಾರ ಮಾಡಿ ಆಂಧ್ರ ಪ್ರದೇಶದ ಚುನಾವಣೆಗೆ ಬಳಸಿದ್ದಾರೆ. ಈ ಹಗರಣದಲ್ಲಿ ಮುಖ್ಯಮಂತ್ರಿಗಳ ಕೈವಾಡವಿದೆ. ನಾಗೇಂದ್ರ ಅವರ ರಾಜೀನಾಮೆ ಪಡೆದು ಪ್ರಕರಣ ಮುಚ್ಚಿ ಹಾಕುವುದಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಆಡಳಿತ ಯಂತ್ರ ಕುಸಿದು ಬಿದ್ದಿದೆ. ಆಡಳಿತ ನಡೆಸಲು ಮುಖ್ಯಮಂತ್ರಿಗಳು ವಿಫಲರಾಗಿದ್ದಾರೆ. ಮೊದಲು ಸಿಎಂ, ಡಿಸಿಎಂ ತಲೆದಂಡ ಮಾಡಿಕೊಂಡು ಮಂತ್ರಿಗಳ ರಾಜೀನಾಮೆ ಕೇಳುವುದು ಸೂಕ್ತ ಎಂದರು.

ಒಂದು ವರ್ಷದಿಂದ ಹಾಲಿನ ಪ್ರೋತ್ಸಾಹ ಧನ ಕೊಟ್ಟಿಲ್ಲ. ಹಾಲಿನ‌ ದರವನ್ನು ಹಾವೇರಿಯಲ್ಲಿ ಕಡಿಮೆ ಮಾಡಿ ಗಾಯದ ಮೇಲೆ ಬರೆ ಎಳೆದಿದ್ದಾರೆ ಎಂದರು.


Spread the love

About Laxminews 24x7

Check Also

ಬಂಗಾರ ದರ ಮತ್ತೆ ಇಳಿಕೆ

Spread the love 26: ಬಂಗಾರ ದರ ನಿನ್ನೆಗೆ ಅಂದರೆ ಜೂನ್‌ 25ಕ್ಕೆ ಹೋಲಿಕೆ ಮಾಡಿದರೆ ಇಂದು (ಜೂನ್‌ 24) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ