Breaking News
Home / ರಾಜಕೀಯ / ಸ್ಮಶಾನಕ್ಕೆ ರಸ್ತೆ ಕಲ್ಪಿಸದಿದ್ದರೆ ಪ್ರತಿಭಟನೆ: ಗ್ರಾಮಸ್ಥರ ಎಚ್ಚರಿಕೆ

ಸ್ಮಶಾನಕ್ಕೆ ರಸ್ತೆ ಕಲ್ಪಿಸದಿದ್ದರೆ ಪ್ರತಿಭಟನೆ: ಗ್ರಾಮಸ್ಥರ ಎಚ್ಚರಿಕೆ

Spread the love

ವಿಜಯಪುರ(ದೇವನಹಳ್ಳಿ): ಹೋಬಳಿಯ ವೆಂಕಟಗಿರಿಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿಂಗವಾರ, ದೊಡ್ಡಸಾಗರಹಳ್ಳಿ ಗ್ರಾಮಗಳ ಜನರಿಗೆ ಮೀಸಲಿಟ್ಟಿರುವ ಸ್ಮಶಾನಕ್ಕೆ ರಸ್ತೆ ನಿರ್ಮಾಣ ಮಾಡಬೇಕು. ಇಲ್ಲದಿದ್ದರೆ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ದೇವನಹಳ್ಳಿ|ಸ್ಮಶಾನಕ್ಕೆ ರಸ್ತೆ ಕಲ್ಪಿಸದಿದ್ದರೆ ಪ್ರತಿಭಟನೆ: ಗ್ರಾಮಸ್ಥರ ಎಚ್ಚರಿಕೆ

ಸ್ಮಶಾನಕ್ಕೆ ರಸ್ತೆ ಇಲ್ಲದೆ ಇಲ್ಲಿನ ಪರದಾಡುತ್ತಿದ್ದಾರೆ. ರಸ್ತೆ ನಿರ್ಮಿಸಿಕೊಡಿ ಎಂದು ಅಧಿಕಾರಿಗಳಿಗೆ ಗಮನಕ್ಕೆ ತಂದರೂ ಪ್ರಯೋಜನವಾಗಲಿಲ್ಲ. ಇನ್ಮುಂದೆ ಯಾರಾದರೂ ಮೃತಪಟ್ಟರೆ ನೇರವಾಗಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಶವ ಇಟ್ಟು ಪ್ರತಿಭಟಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಎರಡೂ ಗ್ರಾಮದಲ್ಲಿ ಯಾರಾದರೂ ಮೃತಪಟ್ಟರೆ, ರೈತರ ಜಮೀನು ಮೂಲಕ ಶವ ತೆಗೆದುಕೊಂಡು ಹೋಗಿ ಅಂತ್ಯಸಂಸ್ಕಾರ ಮಾಡುತ್ತಿದ್ದೆವು. ಇದನ್ನೆ ರೂಢಿ ಮಾಡಿಕೊಂಡು, ರಸ್ತೆಯನ್ನಾಗಿ ಮಾಡಿಕೊಳ್ಳುತ್ತಾರೆ ಎಂದು ಈಗ ರೈತರು ಬಿಡುತ್ತಿಲ್ಲ. ಎಲ್ಲ ರೈತರು ತಮ್ಮ ತೋಟಗಳಿಗೆ ಬೇಲಿ ಹಾಕಿಕೊಂಡಿದ್ದಾರೆ. ಶವ ಹೊತ್ತು ಸಾಗಲು ಜಾಗವಿಲ್ಲ. ರಾಜಕಾಲುವೆ ಮೂಲಕ ಓಡಾಡುತ್ತಿದ್ದೆವು. ಈಗ ಅವು ಒತ್ತುವರಿಯಾಗಿವೆ ಎಂದು ಸಿಂಗವಾರ ಗ್ರಾಮದ ಸರಸ್ವತಮ್ಮ ದೂರಿದರು.


Spread the love

About Laxminews 24x7

Check Also

ಬಂಗಾರ ದರ ಮತ್ತೆ ಇಳಿಕೆ

Spread the love 26: ಬಂಗಾರ ದರ ನಿನ್ನೆಗೆ ಅಂದರೆ ಜೂನ್‌ 25ಕ್ಕೆ ಹೋಲಿಕೆ ಮಾಡಿದರೆ ಇಂದು (ಜೂನ್‌ 24) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ