Breaking News

ತೈಲ ಬೆಲೆ ಏರಿಕೆ ಸಾಮಾನ್ಯರನ್ನು ಬಾಧಿಸದು: ಸಚಿವ ಕೆ.ಎಚ್‌.ಮುನಿಯಪ್ಪ

Spread the love

ವಿಜಯಪುರ(ದೇವನಹಳ್ಳಿ): ‘ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಕಡಿಮೆ ಇದೆ. ಸ್ವಲ್ಪ ಪ್ರಮಾಣದಲ್ಲಿ ಬೆಲೆ ಏರಿಕೆ ಮಾಡಲಾಗಿದೆ. ರೈತರು ಮತ್ತು ಸಾರ್ವಜನಿಕರನ್ನು ಇದು ಬಾಧಿಸದು’ ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.

ತೈಲ ಬೆಲೆ ಏರಿಕೆ ಸಾಮಾನ್ಯರನ್ನು ಬಾಧಿಸದು: ಸಚಿವ ಕೆ.ಎಚ್‌.ಮುನಿಯಪ್ಪ

ಪಟ್ಟಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಿಗಿಂತ ರಾಜ್ಯದಲ್ಲಿ ತೈಲ ಬೆಲೆ ಕಡಿಮೆ ಇದೆ. ಸಾಮಾನ್ಯ ವರ್ಗದ ಜನರನ್ನು ಗಮನದಲ್ಲಿ ಇಟ್ಟುಕೊಂಡೆ ಬೆಲೆಯನ್ನು ಸ್ವಲ್ಪ ಪ್ರಮಾಣದಲ್ಲಿ ಏರಿಕೆ ಮಾಡಲಾಗಿದೆ ಎಂದರು.

ಸಾರ್ವಜನಿಕರು ಸರ್ಕಾರದ ವಿರುದ್ಧ ಪ್ರತಿಭಟಿಸಬೇಕು ಎಂಬ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ