Breaking News
Home / ರಾಜಕೀಯ / ರೇಣುಕಸ್ವಾಮಿ ಕೊಲೆ ಪ್ರಕರಣ| ಕಲಾವಿದರ ವ್ಯಕ್ತಿತ್ವ ಮಾದರಿಯಾಗಿರಲಿ: ಕೂಡಲಸಂಗಮಶ್ರೀ

ರೇಣುಕಸ್ವಾಮಿ ಕೊಲೆ ಪ್ರಕರಣ| ಕಲಾವಿದರ ವ್ಯಕ್ತಿತ್ವ ಮಾದರಿಯಾಗಿರಲಿ: ಕೂಡಲಸಂಗಮಶ್ರೀ

Spread the love

ರೇಣುಕಸ್ವಾಮಿ ಕೊಲೆ ಪ್ರಕರಣ| ಕಲಾವಿದರ ವ್ಯಕ್ತಿತ್ವ ಮಾದರಿಯಾಗಿರಲಿ: ಕೂಡಲಸಂಗಮಶ್ರೀ

 

ಥಣಿ : ‘ಯಾವುದೇ ಕಲಾವಿದರು ಜನರಿಗೆ ಮಾದರಿಯಾಗುವಂಥ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಇಲ್ಲದಿದ್ದರೆ ರೇಣುಕಸ್ವಾಮಿ ಕೊಲೆಯಂಥ ಘಟನೆ ನಡೆಯುತ್ತವೆ’ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.ರೇಣುಕಸ್ವಾಮಿ ಕೊಲೆ ಪ್ರಕರಣ| ಕಲಾವಿದರ ವ್ಯಕ್ತಿತ್ವ ಮಾದರಿಯಾಗಿರಲಿ: ಕೂಡಲಸಂಗಮಶ್ರೀ

ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾವು ರಾಜಕುಮಾರ್, ವಿಷ್ಣುವರ್ಧನ್ ಅವರಂಥ ನಟರನ್ನು ಆದರ್ಶವಾಗಿ ತೆಗೆದುಕೊಳ್ಳಬೇಕು.

ಪರದೆ ಮೇಲೆ ವಿವಿಧ ಪಾತ್ರಗಳನ್ನು ನಿರ್ವಹಿಸುವ ಕಲಾವಿದರು, ವಾಸ್ತವ ಬದುಕಿನಲ್ಲಿ ಜನರಿಗೆ ಮಾದರಿಯಾಗುವಂತೆ ಬದುಕಬೇಕು. ಕಾನೂನಿನ ಮುಂದೆ ಎಲ್ಲರೂ ಸಮಾನರು. ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು’ ಎಂದರು.

‘ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಪಡೆಯುವ ಹೋರಾಟ ನಿಂತಿಲ್ಲ. ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿರಂತರವಾಗಿರಲಿದೆ. ನಮಗೆ ಸ್ಪಂದನೆ ಸಿಗದಿದ್ದರೆ, ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನ ವೇಳೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಎಚ್ಚರಿಕೆ ನೀಡಿದರು


Spread the love

About Laxminews 24x7

Check Also

ಬಂಗಾರ ದರ ಮತ್ತೆ ಇಳಿಕೆ

Spread the love 26: ಬಂಗಾರ ದರ ನಿನ್ನೆಗೆ ಅಂದರೆ ಜೂನ್‌ 25ಕ್ಕೆ ಹೋಲಿಕೆ ಮಾಡಿದರೆ ಇಂದು (ಜೂನ್‌ 24) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ