Breaking News

ರಾಯಬಾಗ: ಕೆರೆ-ಕೊಳ್ಳಗಳು ಭರ್ತಿ

Spread the love

ರಾಯಬಾಗ: ಕೆರೆ-ಕೊಳ್ಳಗಳು ಭರ್ತಿಯಾದರೆ ಅಂತರ್ಜಲ ಮಟ್ಟದಲ್ಲಿ ಏರಿಕೆಯಾಗಿ ಜನರಿಗೆ ನೀರಿನ ಬವಣೆ ತಪ್ಪುತ್ತದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ ಹೇಳಿದರು.

ತಾಲ್ಲೂಕಿನ ನಂದಿಕುರಳಿ ಗ್ರಾಮದಲ್ಲಿ ಕೆರೆಗೆ ಬಾಗಿನ ಅರ್ಪಣೆ ಮಾಡಿ ಅವರು ಮಾತನಾಡಿದರು.

ಶಿವನಗೌಡ ಪಾಟೀಲ ಮಾತನಾಡಿ, ‘ವರುಣನ ಕೃಪಾ ಕಟಾಕ್ಷದಿಂದ ಮಳೆ ಬಂದು ಹಲವಾರು ಕೆರೆ, ಕಟ್ಟೆಗಳಿಗೆ ನೀರು ಅಲ್ಪ ಸ್ವಲ್ಪ ಬಂದಿದೆ. ಹಳ್ಳ ಕೊಳ್ಳಗಳು ಹರಿದಿರುವುದರಿಂದ ಕುಡಿಯುವ ನೀರಿನ ಅಭಾವ ತಪ್ಪಿದಂತಾಗಿದೆ. ದನ ಕರುಗಳಿಗೆ ಮೇವಿನ ಕೊರತೆ ನೀಗಿದಂತಾಗಿದೆ. ಸಚಿವ ಸತೀಶ ಜಾರಕಿಹೊಳಿ ಅವರು ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ’ ಎಂದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ