Breaking News

ಸ್ವಾವಲಂಬಿ ಬದುಕಿಗೆ ಧರ್ಮಸ್ಥಳ ಸಂಘ ಸಹಕಾರಿ: ಉದ್ಯಮಿ ರಾಜು ಶೆಟ್ಟಿ

Spread the love

ಯರಗಟ್ಟಿ: ‘ಮಹಿಳೆಯರು ಸ್ವಂತ ಉದ್ಯೋಗ ಮಾಡಲು ತರಬೇತಿ ನೀಡುವ ಜೊತೆಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಸಹಕಾರಿಯಾಗಿದೆ’ ಎಂದು ಹೋಟೆಲ್‌ ಉದ್ಯಮಿ ರಾಜು ಶೆಟ್ಟಿ ಹೇಳಿದರು.

ಪಟ್ಟಣದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಚೇರಿಯಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ವೀಲ್ ಚೇರ್ ಮತ್ತು ವಾಟರ್ ಬೆಡ್ ವಿತರಿಸಿ ಅವರು ಮಾತನಾಡಿದರು.

ಸ್ವಾವಲಂಬಿ ಬದುಕಿಗೆ ಧರ್ಮಸ್ಥಳ ಸಂಘ ಸಹಕಾರಿ: ಉದ್ಯಮಿ ರಾಜು ಶೆಟ್ಟಿ

ಸಂಸ್ಥೆಯ ಜಿಲ್ಲಾ ನಿರ್ದೇಶಕ ಲವಕುಮಾರ ಮಾತನಾಡಿ, ‘ಸಂಸ್ಥೆ ಮಹಿಳೆಯರ ಅಭಿವೃದ್ಧಿ ಜೊತೆಗೆ ಕುಟಂಬದ ಪ್ರಗತಿಗೂ ಹಲವು ಯೋಜನೆ ರೂಪಿಸುತ್ತಿದೆ. ಮಹಿಳೆ ಹಾಗೂ ಪುರುಷರು ಒಟ್ಟಾಗಿ ಸಂಸ್ಥೆಯ ಯೋಜನೆಗಳ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು.

ಸಂಸ್ಥೆಯ ಡಿ. ಸತೀಶ್, ನಾಗೇಶ ನಾಯ್ಕ, ಧಾರವಾಡ ಪ್ರಾದೇಶಿಕ ಕಚೇರಿ ಯೋಜನಾಧಿಕಾರಿ ಆರತಿ, ಕಿಟ್ಟು ತೋರಗಲ್ಲ ಹಾಗೂ ಇತರರು ಇದ್ದರು.


Spread the love

About Laxminews 24x7

Check Also

ಸಾಗರ | ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಪ್ರವಾಸಿ ಬಸ್ – 8 ಮಹಿಳೆಯರಿಗೆ ಗಾಯ

Spread the loveಶಿವಮೊಗ್ಗ: ಪ್ರವಾಸಕ್ಕೆ ಬಂದಿದ್ದ ಬಸ್ ಬ್ರೇಕ್‌ ಫೇಲ್‌ ಆಗಿ ಮನೆಯೊಂದರ ಮೇಲೆ ಬಿದ್ದ ಘಟನೆ ಸಾಗರ  ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ