Breaking News

ವಿದ್ಯಾರ್ಥಿಗಳು, ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ : ʻKSRTCʼಯಿಂದ 300ಕ್ಕೂ ಹೆಚ್ಚಿನ ಹೊಸ ಮಾರ್ಗಗಳಲ್ಲಿ ಹೆಚ್ಚುವರಿ ಬಸ್‌ ಸೇವೆ!

Spread the love

ಬೆಂಗಳೂರು : ವಿದ್ಯಾರ್ಥಿಗಳು, ಪ್ರಯಾಣಿಕರಿಗೆ ಕೆಎಸ್‌ ಆರ್‌ ಟಿಸಿ (KSRTC) ಸಿಹಿಸುದ್ದಿ ನೀಡಿದ್ದು, ಬಸ್‌ ಗಳಲ್ಲಿನ ರಶ್‌ ತಪ್ಪಿಸಲು 300ಕ್ಕೂ ಹೆಚ್ಚಿನ ಹೊಸ ಮಾರ್ಗಗಳಲ್ಲಿ ಹೆಚ್ಚುವರಿ ಬಸ್‌ ಸೇವೆ ಆರಂಭಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿರ್ಧಾರ ಮಾಡಿದೆ.

ವಿದ್ಯಾರ್ಥಿಗಳು, ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ : ʻKSRTCʼಯಿಂದ 300ಕ್ಕೂ ಹೆಚ್ಚಿನ ಹೊಸ ಮಾರ್ಗಗಳಲ್ಲಿ ಹೆಚ್ಚುವರಿ ಬಸ್‌ ಸೇವೆ!

ಕೆಎಸ್‌ ಆರ್‌ ಟಿಸಿ ಶಾಲೆ-ಕಾಲೇಜುಗಳು ಹೆಚ್ಚಿರುವ ಮಾರ್ಗಗಳನ್ನು ಅಂತಹ ಭಾಗಗಳಿಗೆ ಹೆಚ್ಚುವರಿ ಅಥವಾ ಹೊಸದಾಗಿ ಬಸ್ ಸೇವೆ ಆರಂಭಿಸಲು ಸಿದ್ದತೆ ನಡೆಸಿದೆ. ಕೆಎಸ್‌ಆರ್​​ಟಿಸಿಗೆ ಸೇರ್ಪಡೆಯಾಗಿರುವ 814 ಬಸ್‌ಗಳ ಪೈಕಿ 500 ಬಸ್​ಗಳನ್ನು ನಿಯೋಜಿಸಲು ನಿರ್ಧಾರ ಮಾಡಲಾಗಿದೆ.

ಜನಸಾಮಾನ್ಯರು ಬಳಸುವ ಅಶ್ವಮೇಧ ಬಸ್‌ಗಳಿಗೆ ಉತ್ತಮ ಸ್ಪಂದನೆ ದೊರಕಿದೆ. ಈಗಾಗಲೇ 500ಕ್ಕೂ ಅಧಿಕ ಅಶ್ವಮೇಧ ಬಸ್‌ಗಳಿವೆ. ಎಲ್ಲ ಕಡೆಯಿಂದ ಬೇಡಿಕೆ ಬರುತ್ತಿರುವುದರಿಂದ ಇನ್ನಷ್ಟು ಬಸ್‌ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಎಂಆರ್​ಪಿ ಬಾರ್​ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ

Spread the loveಚಾಮರಾಜನಗರ, ಫೆಬ್ರವರಿ 05: ಎಂಆರ್​ಪಿ ಬಾರ್​ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ