ಬೆಂಗಳೂರು : ಪಿಎಸ್ ಐ ನೇಮಕಾತಿ ವಿಚಾರ ಅಂತಿಮ ಹಂತದಲ್ಲಿದ್ದು, ಈ ವಾರ ಅಥವಾ ಮುಂದಿನ ವಾರದಲ್ಲಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ತಾಂತ್ರಿಕ ಪ್ರಶ್ನೆಗಳನ್ನು ತೆಗೆಯಲಾಗಿದೆ.
ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸುತ್ತೇವೆ. ಈ ಸಂಬಂಧ ನಾನು ಎರಡು-ಮೂರು ಸಭೆ ನಡೆಸಿದ್ದೇನೆ. ಈ ವಾರ ಅಥವಾ ಮುಂದಿನ ವಾರ ಅಂತಿಮ ತೀರ್ಮಾಣ ಕೈಗೊಳ್ಳಾಗುವುದು ಎಂದು ಹೇಳಿದ್ದಾರೆ.
ಇನ್ನು ದರ್ಶನ್ & ಗ್ಯಾಂಗ್ ನಿಂದ ಹತ್ಯೆಯಾದ ಚಿತ್ರುದರ್ಗದ ರೇಣುಕಾಸ್ವಾಮಿ ಮನೆಗೆ ಇಂದು ಸಚಿವ ಡಾ.ಜಿ.ಪರಮೇಶ್ವರ್ ಅವರು ಭೇಟಿ ನೀಡಲಿದ್ದು, ಹತ್ಯೆಯಾದ ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ.