ಹುಬ್ಬಳ್ಳಿ: ಭಾಷಣದ ಬರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ದೂರು ದಾಖಲಾಗಿದೆ.
ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.
ಇದೇ ವೇಳೆ ನಿನ್ನೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದಿದ್ದ ಬಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಸಿ.ಟಿ.ರವಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಹಿಗ್ಗಾಮುಗ್ಗಾ ಕಿಡಿಕಾರಿದ್ದರು.
ಮೂರು ಬಿಟ್ಟವರು ಭಂಡತನದ ಸಮರ್ಥನೆ ಮಾಡಿಕೊಳ್ತಾರೆ. ಭಂಡತನ ಸಮರ್ಥೆ ಬಿಟ್ಟು ಯಾಕೆ ಸೆಸ್ ಹಾಕಿದ್ದಾರೆ ಎಂದು ಹೇಳಲಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಮುಖ್ಯಮಂತ್ರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಸಿ.ಟಿ.ರವಿ ವಿರುದ್ಧ ರಾಜ್ಯ ಬಾಲವಿಕಾಸ ಅಕಾಡೆಮಿ ಮಾಜಿ ಅಧ್ಯಕ್ಷ ವೇದವ್ಯಾಸ ಕೌಲಗಿ, ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮಾನನಷ್ಟ ಕೊಕದ್ದಮೆ ಹೂಡುವಂತೆ ಒತ್ತಾಯಿಸಿದ್ದಾರೆ.
Laxmi News 24×7