Breaking News

ದೇಶದ ಹಲವು ವಿಮಾನ ನಿಲ್ದಾಣಗಳಿಗೆ ‘ಬಾಂಬ್ ಬೆದರಿಕೆ

Spread the love

ವದೆಹಲಿ: ಮುಂಬೈ, ಜೈಪುರ ಮತ್ತು ಪಾಟ್ನಾ ವಿಮಾನ ನಿಲ್ದಾಣಗಳು ಸೇರಿದಂತೆ ದೇಶಾದ್ಯಂತ 40 ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ.

BREAKING: ದೇಶದ ಹಲವು ವಿಮಾನ ನಿಲ್ದಾಣಗಳಿಗೆ 'ಬಾಂಬ್ ಬೆದರಿಕೆ': ಎಲ್ಲೆಡೆ ಹೈ ಅಲರ್ಟ್ | Bomb Threats

ಖಾಸಗಿ ಸುದ್ದಿ ವಾಹಿನಿಗಳ ಮೂಲಗಳ ಪ್ರಕಾರ, ಇತರ ನಗರಗಳ ಜೊತೆಗೆ ಜೈಪುರದಲ್ಲಿ ವಿಮಾನ ನಿಲ್ದಾಣವನ್ನು ಸ್ಫೋಟಿಸಲು ಟ್ರೀಟ್ ಮೇಲ್ ಸ್ವೀಕರಿಸಲಾಗಿದೆ.

ಮೇಲ್ ಸ್ವೀಕರಿಸಿದ ಕೂಡಲೇ ಭದ್ರತೆಯನ್ನು ಬಿಗಿಗೊಳಿಸಲಾಯಿತು, ನಂತರ ವಿಮಾನ ನಿಲ್ದಾಣದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತು.

ಆದಾಗ್ಯೂ, ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, ಕೆಲವು ಕಿಡಿಗೇಡಿಗಳು ಬೆದರಿಕೆ ಮೇಲ್ ಕಳುಹಿಸಿದ್ದಾರೆ. ಮೇಲ್ ಕಳುಹಿಸಿದ್ದಾರೆಂದು ನಂಬಲಾದ ವ್ಯಕ್ತಿಗಾಗಿ ಐಪಿ ವಿಳಾಸದ ಮೂಲಕ ಹುಡುಕಾಟ ನಡೆಯುತ್ತಿದೆ.

“ವಿಮಾನ ನಿಲ್ದಾಣವನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದೆ. ಆದರೆ ಇಲ್ಲಿಯವರೆಗೆ ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ” ಎಂದು ಪೊಲೀಸರು ತಿಳಿಸಿದ್ದಾರೆ. ಮುಂಬೈ, ಪಾಟ್ನಾ ವಿಮಾನ ನಿಲ್ದಾಣ ಸೇರಿದಂತೆ ಹಲವಾರು ಮೇಲ್ಗಳನ್ನು ಸ್ವೀಕರಿಸುವ ಸ್ಥಳಗಳಲ್ಲಿ ಭದ್ರತಾ ವ್ಯವಸ್ಥೆಗಳನ್ನು ಬಿಗಿಗೊಳಿಸಲಾಗಿದೆ.


Spread the love

About Laxminews 24x7

Check Also

ಬಿಜೆಪಿ-ಜೆಡಿಎಸನಲ್ಲಿ ಅಸಮಾಧಾನಗೊಂಡ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ ಏನಂದ್ರು??

Spread the loveಜ್ಯಾತ್ಯಾತೀತವಾಗಿ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ವಾಗತವಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ