Breaking News

ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ‘ಕೆಂಪೇಗೌಡ ಜಯಂತಿ’ ಆಚರಣೆಗೆ 1 ಲಕ್ಷ ವಿತರಣೆ : ರಾಜ್ಯ ಸರ್ಕಾರ ಘೋಷಣೆ

Spread the love

ಬೆಂಗಳೂರು : ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ ನೀಡಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡರ ಬಗ್ಗೆ ವಿದ್ಯಾರ್ಥಿಗಳಿಗೆ ವಿಚಾರಸಂಕಿರಣ ಏರ್ಪಡಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ರೂ.1 ಲಕ್ಷ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ 'ಕೆಂಪೇಗೌಡ ಜಯಂತಿ' ಆಚರಣೆಗೆ 1 ಲಕ್ಷ ವಿತರಣೆ : ರಾಜ್ಯ ಸರ್ಕಾರ ಘೋಷಣೆ

ಕೆಂಪೇಗೌಡರ ಜಯಂತಿ ಆಚರಣೆ ಸಂಬಂಧ ವಿಧಾನಸೌಧದಲ್ಲಿಏರ್ಪಡಿಸಿದ್ದ ಪೂರ್ವಭಾವಿ ಸಭೆ ಹಾಗೂ ನಂತರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲಾ ಮಕ್ಕಳಿಗೆ ಕೆಂಪೇಗೌಡರ ಕುರಿತು ಚರ್ಚಾಸ್ಪರ್ಧೆ ಏರ್ಪಡಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 20 ಸಾವಿರ, ತಾಲ್ಲೂಕು ಕೇಂದ್ರಗಳಿಗೆ 20 ಸಾವಿರದ ಜೊತೆಗೆ ಹೆಚ್ಚುವರಿಯಾಗಿ 1 ಲಕ್ಷ ನೀಡಲಾಗುವುದು. ಜಿಲ್ಲಾ ಕೇಂದ್ರಗಳಿಗೆ 50 ಸಾವಿರ ನೀಡಲಾಗುತ್ತಿದ್ದು ಹೆಚ್ಚು ಮಾಡಲು ಚಿಂತನೆ ನಡೆಸಲಾಗುವುದು.

ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವವನ್ನು ಅರಮನೆ ಮೈದಾನ ಅಥವಾ ಹೊರಾಂಗಣ ಮೈದಾನದಲ್ಲಿ ಜೂನ್ 27 ರಂದು ನಡೆಸಲು ತೀರ್ಮಾನಿಸಲಾಗಿದೆ. ಹುಲಿಯೂರುದುರ್ಗ, ಮಾಗಡಿ, ಆವತಿ ಸೇರಿದಂತೆ ಬೆಂಗಳೂರಿನ ಎಲ್ಲಾ ದಿಕ್ಕುಗಳಿಂದ ಪ್ರತಿವರ್ಷದಂತೆ ಗೋಪುರ ಮತ್ತು ಜ್ಯೋತಿಗಳ ಮೆರವಣಿಗೆ ಬರುತ್ತದೆ.


Spread the love

About Laxminews 24x7

Check Also

ಬಿಜೆಪಿ ತಂದೆ ಮಕ್ಕಳ ಪಕ್ಷ ಆಗಿದೆ: ಕೆ ಎಸ್ ಈಶ್ವರಪ್ಪ.

Spread the love ಬಿಜೆಪಿ ಪಕ್ಷದ ಈಗಿನ ಸ್ಥಿತಿ ನೋಡಿದ್ರೆ ದುಃಖ ಆಗುತ್ತೆ: ಕೆ ಎಸ್ ಈಶ್ವರಪ್ಪ. ರಾಯಬಾಗ : …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ