Breaking News

NEETಲೋಪ: ಸುಪ್ರೀಂ ತರಾಟೆ; ತಪ್ಪಾಗಿದ್ದರೆ ಒಪ್ಪಿಕೊಳ್ಳಿ : ಎನ್‌ಟಿಎಗೆ ತಾಕೀತು

Spread the love

ಹೊಸದಿಲ್ಲಿ: ನೀಟ್‌-ಯುಜಿ ಅಕ್ರಮದ ವಿಚಾರಣೆ ವೇಳೆ ಮಂಗಳವಾರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯನ್ನು ಸರ್ವೋಚ್ಚ ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿದೆ.

“ನೀಟ್‌-ಯುಜಿ 2024 ಪರೀಕ್ಷೆ ಸಂದರ್ಭ ಸಾಸಿವೆ ಕಾಳಿನಷ್ಟು ಲೋಪ ಆಗಿದ್ದರೂ ಆ ಕುರಿತು ಸಮಗ್ರ ತನಿಖೆ ನಡೆಸಬೇಕು.

ಪರೀಕ್ಷೆಗಾಗಿ ವಿದ್ಯಾರ್ಥಿಗಳು ಭಾರೀ ಪರಿಶ್ರಮ ನಡೆಸಿರುತ್ತಾರೆ ಎಂಬುದನ್ನು ನಾವು ಮರೆಯುವ ಹಾಗಿಲ್ಲ. ಒಂದು ವೇಳೆ ನಿಮ್ಮಿಂದ ತಪ್ಪಾಗಿದ್ದರೆ ಒಪ್ಪಿಕೊಳ್ಳಿ’ ಎಂದು ಎನ್‌ಟಿಎಗೆ ಸರ್ವೋಚ್ಚ ನ್ಯಾಯಾಲಯ ಸೂಚಿಸಿದೆ.

ನೀಟ್‌ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಕೃಪಾಂಕಕ್ಕೆ ತಕರಾರು, ಮೇ ತಿಂಗಳಿನಲ್ಲಿ ನಡೆದ ಪರೀಕ್ಷೆಯನ್ನು ರದ್ದು ಪಡಿಸ ಬೇಕು ಎಂದು ಕೋರಿ ಸಲ್ಲಿಕೆ ಯಾದ ಅರ್ಜಿಗಳ ವಿಚಾ ರಣೆ ವೇಳೆ ನ್ಯಾ| ವಿಕ್ರಮ್‌ ನಾಥ್‌ ಹಾಗೂ ಎಸ್‌.ವಿ.ಎನ್‌. ಭಟ್ಟಿ ಅವರಿದ್ದ ಸುಪ್ರೀಂ ಕೋರ್ಟ್‌ನ ರಜಾಕಾಲದ ಪೀಠವು ಹೀಗೆ ಅಭಿಪ್ರಾಯಪಟ್ಟಿದೆ.


Spread the love

About Laxminews 24x7

Check Also

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡಲ್ಲ: ತಿರುವಾಂಕೂರು ದೇವಸ್ವಂ ಮಂಡಳಿ ನಿರ್ಣಯ

Spread the loveತಿರುವಂತಪುರ: ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ  ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (TDB) ಮಹತ್ವದ ನಿರ್ಣಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ