Breaking News

ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ದುಬಾರಿ ; ಸೈಕಲ್ ಏರಿ ಪ್ರತಿಭಟಿಸಿದ ಬಿಜೆಪಿ

Spread the love

ಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಏರಿಕೆ ಖಂಡಿಸಿ ಬಿಜೆಪಿ ನಾಯಕರು ಇಂದು ಸೈಕಲ್ ಏರಿ ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಿಂದ ವಿಧಾನಸೌಧದವರೆಗೆ ಸೈಕಲ್ ಜಾಥಾ ನಡೆಯಿತು.

ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಸೈಕಲ್ ಜಾಥಾ ನಡೆಯಿತು.

ಈ ಸಂದರ್ಭದಲ್ಲಿ ಮಾಜಿಉಪಮುಖ್ಯಮಂತ್ರಿಗಳಾದ ಅಶ್ವಥ್ ನಾರಾಯಣ್, ಸಿಟಿ ರವಿ,ಮಾಜಿ ಸಚಿವರು, ಶಾಸಕರು, ಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.BREAKING : ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ದುಬಾರಿ ; ಸೈಕಲ್ ಏರಿ ಪ್ರತಿಭಟಿಸಿದ ಬಿಜೆಪಿ ನಾಯಕರು |Video

ರಾಜ್ಯ ಕಾಂಗ್ರೆಸ್ ಸರ್ಕಾರದ ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ನಿರ್ಧಾರವನ್ನು ಖಂಡಿಸಿ ಇಂದು ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರದಲ್ಲಿ ರಸ್ತೆ ತಡೆದು ಪ್ರತಿಭಟಿಸಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕೂಡಲೇ ತಮ್ಮ ಭಂಡತನವನ್ನು ತೊರೆದು ಬೆಲೆ ಏರಿಕೆಯ ನಿರ್ಧಾರವನ್ನು ಹಿಂಪಡೆಯಬೇಕೆಂದು ಆಗ್ರಹಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಮನ್ಮುಲ್ ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ – ಮತ್ತೆ ಮೂವರ ಬಂಧನ, 11ಕ್ಕೇರಿದ ಆರೋಪಿಗಳ ಸಂಖ್ಯೆ

Spread the loveಮಂಡ್ಯ: ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘ  ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ