ಬೆಂಗಳೂರು:- ಕರ್ನಾಟಕದಲ್ಲಿ ವಾಸವಾಗಿರುವ ಪದವೀಧರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಪಶುಪಾಲನೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೀಗಾಗಿ ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬಹುದು.
ಒಟ್ಟು 400 ಹುದ್ದೆಗಳು ಖಾಲಿಯಿದ್ದು, ಅದನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪಶು ವೈದ್ಯಾಧಿಕಾರಿ ಹುದ್ದೆ ಇದಾಗಿದ್ದು, ಗುತ್ತಿಗೆ ಆಧಾರದಲ್ಲಿ ನೇಮಿಸಲಾಗುತ್ತದೆ. ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಒಟ್ಟು 400 ಹುದ್ದೆಗಳಿದ್ದು, ಈ ಪೈಕಿ ಕಲ್ಯಾಣ ಕರ್ನಾಟಕಕ್ಕೆ 14 ಪೋಸ್ಟ್ ಮೀಸಲಿಡಲಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ 52,640 ರೂ. ಮಾಸಿಕ ವೇತನ ದೊರೆಯಲಿದೆ.