ಬೆಳಗಾವಿ: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಇಲ್ಲಿನ ಧರ್ಮವೀರ ಸಂಭಾಜಿ ವೃತ್ತದಲ್ಲಿ ಬಿಜೆಪಿ ಉತ್ತರ ಮಂಡಳದವರು ಗುರುವಾರ ಪ್ರತಿಭಟನೆ ನಡೆಸಿದರು.
ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ನೇತೃತ್ವ ವಹಿಸಿದ್ದ ಸಂಸದ ಜಗದೀಶ ಶೆಟ್ಟರ್, ‘ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ದರ ಹೆಚ್ಚಿಸುತ್ತಿದೆ. ಅದರಲ್ಲೂ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಎಲ್ಲದರ ಮೇಲೆ ಪರಿಣಾಮ ಬೀರುತ್ತದೆ. ಇದು ಸರಿಯಾದ ಕ್ರಮವಲ್ಲ. ಸರ್ಕಾರ ಇದೇ ನೀತಿ ಮುಂದುವರಿಸಿದರೆ ಜನ ದಂಗೆ ಏಳುವ ಪರಿಸ್ಥಿತಿ ನಿರ್ಮಾಣವಾಗಲಿದೆ’ ಎಂದು ಎಚ್ಚರಿಸಿದರು.