ಮಳೆ ಅಬ್ಬರಿಸುತ್ತಿದ್ದು, ಎಲ್ಲೆಲ್ಲೂ ಮಳೆರಾಯ ತನ್ನ ರೌದ್ರಾವತಾರ ತೋರಿಸುತ್ತಿದ್ದಾನೆ. ಈ ನಡುವೆ ಕರ್ನಾಟಕದ ಒಳನಾಡು ಪ್ರದೇಶದಲ್ಲಿ ಮಳೆ ಅಬ್ಬರ ಸ್ವಲ್ಪ ಕಡಿಮೆ ಆಗಿದೆ ಅಂತಾ ಕೊರಗುವ ಸಮಯದಲ್ಲೇ ಮತ್ತೊಮ್ಮೆ ಭರ್ಜರಿ ಮಳೆಯ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ.
ಹಾಗಾದ್ರೆ ಯಾವೆಲ್ಲಾ ಜಿಲ್ಲೆಗಳಿಗೆ ಭರ್ಜರಿ ಮಳೆ ಬೀಳಲಿದೆ? ಮುಂದಿನ 7 ದಿನಗಳ ಕಾಲ ಮಳೆ ಅಬ್ಬರಿಸುವ ಕರ್ನಾಟಕದ ಜಿಲ್ಲೆಗಳು ಯಾವುವು? ಬನ್ನಿ ಸಂಪೂರ್ಣ ಮಾಹಿತಿ ತಿಳಿಯೋಣ.
ಕರ್ನಾಟಕ ರಾಜ್ಯದಲ್ಲಿ ತುಂತುರು ಮಳೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆ ಬೀಳಲಿದೆ. ಈ ಮೂಲಕ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಇದೀಗ ಹವಾಮಾನ ಇಲಾಖೆ ವರದಿ ಮಾಹಿತಿ ನೀಡಿದೆ. ಜೂನ್ 21 ರಿಂದ 7 ದಿನಗಳ ಕಾಲ ಕರ್ನಾಟಕದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದೆ ಜೂನ್ 21 ರಿಂದ 28 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ & ಮಲೆನಾಡು ಪ್ರದೇಶಗಳಲ್ಲಿ ಕೂಡ ಮಳೆ ಅಬ್ಬರ ತೋರಿಸಲಿದೆ. ಹೀಗಾಗಿ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಲು ತಿಳಿಸಿದ್ದಾರೆ