Breaking News

ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ KSRTC ಶಾಕ್: ಬರೋಬ್ಬರಿ 3754 ಮಂದಿಗೆ ದಂಡ

Spread the love

ಬೆಂಗಳೂರು: ಟಿಕೆಟ್ ಇಲ್ಲದೇ ಪ್ರಯಾಣಿಸಿದಂತ ಪ್ರಯಾಣಿಕರಿಗೆ ಕೆ ಎಸ್ ಆರ್ ಟಿಸಿ ಬಿಗ್ ಶಾಕ್ ಎನ್ನುವಂತೆ, ಬರೋಬ್ಬರಿ 3754 ಮಂದಿಗೆ ದಂಡವನ್ನು ವಿಧಿಸಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ಮೇ-2024 ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 42,680 ವಾಹನಗಳನ್ನು ತನಿಖೆಗೊಳಪಡಿಸಿ 3708 ಪ್ರಕರಣಗಳನ್ನು ಪತ್ತೆಹಚ್ಚಿ, 3754 ಟಿಕೇಟ್ ರಹಿತ ಪ್ರಯಾಣಿಕರಿಂದ 6,54,738/-ರೂಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗಿದೆ ಅಂತ ತಿಳಿಸಿದೆ.

ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ KSRTC ಶಾಕ್: ಬರೋಬ್ಬರಿ 3754 ಮಂದಿಗೆ ದಂಡ | KSRTC Bus Ticket

ಇನ್ನೂ ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 88,429/- ರೂಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ, ಹಾಗೂ ತಪ್ಪಿತಸ್ಥರ ವಿರುದ್ದ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ ಎಂಬುದಾಗಿ ಹೇಳಿದೆ.

ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ, ನಿಗಮವು ಈ ಮೂಲಕ ಪ್ರಯಾಣಿಕರಲ್ಲಿ ಕೋರಿದೆ.


Spread the love

About Laxminews 24x7

Check Also

ಎಂಆರ್​ಪಿ ಬಾರ್​ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ

Spread the loveಚಾಮರಾಜನಗರ, ಫೆಬ್ರವರಿ 05: ಎಂಆರ್​ಪಿ ಬಾರ್​ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ