ಆನಂದಪುರ: ಯೋಗವನ್ನು ಚಿಕ್ಕವಯಸ್ಸಿನಿಂದಲೇ ಪ್ರತಿಯೊಬ್ಬ ವಿದ್ಯಾರ್ಥಿಗಳು ರೂಢಿಸಿಕೊಳ್ಳುವುದರಿಂದ ಬಹಳಷ್ಟು ಅನುಕೂಲಗಳಿವೆ ಎಂದು ಕರ್ನಾಟಕ ಪಬ್ಲಿಕ್ ಶಾಲೆಯ ಉಪಪ್ರಾಂಶುಪಾಲ ಈಶ್ವರಪ್ಪ ಹೇಳಿದರು.
ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಯೋಗ ಅಭ್ಯಾಸವನ್ನು ವಿದ್ಯಾರ್ಥಿಗಳಿಗೆ ಮಾಡಿಸಲಾಯಿತು.
ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಯೋಗ ಮಾಡುವುದರಿಂದ ಮನಸ್ಸು ಮತ್ತು ದೇಹವನ್ನು ಸದೃಢವಾಗಿ ಇಟ್ಟುಕೊಳ್ಳಬಹುದು. ಯೋಗದಿಂದ ಸಕಲವೂ ಸಾಧಿಸಬಹದು. ಇದನ್ನು ವಿದ್ಯಾರ್ಥಿಗಳು ದಿನನಿತ್ಯ ಮನೆಯಲ್ಲಿ ಮಾಡಬೇಕು ಎಂದು ಹೇಳಿದರು.