ಬೆಳಗಾವಿ: ಮೇವು ಖರೀದಿಯಲ್ಲಿ ಹಗರಣ ನಡೆದಿರುವ ಬಗ್ಗೆ ಇದುವರೆಗೆ ಯಾರು ದೂರು ನೀಡಿಲ್ಲ. ಈ ಬಗ್ಗೆ ಅಕ್ರಮ ನಡೆದಿದ್ದರೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಪಶು ಸಂಗೋಪನೆ ಇಲಾಖೆಯಲ್ಲಿ ಜಿಲ್ಲೆಯಲ್ಲಿ ಮೇವು ಖರೀದಿಗೆ ಮಂಜೂರಾದ 6 ಕೋಟಿ ರೂ.
ಅನುದಾನಲ್ಲಿ ಅವ್ಯವಹಾರ ಆಗಿದೆ ಎಂಬ ಆರೋಪದ ಬಗ್ಗೆ ನಮ್ಮ ಗಮನಕ್ಕೆ ಬಂದಿಲ್ಲ. ಇಲಾಖೆಯಲ್ಲಿ ಏನಾಗಿದೆ, ಅನುದಾನ ಹೇಗೆ ಬಳಕೆ ಮಾಡಲಾಗಿದೆ ಎಂಬ ಮಾಹಿತಿ ಪಡೆದುಕೊಳ್ಳಲಾಗುವುದು. ಜಿಲ್ಲಾ ಧಿಕಾರಿಗಳು ತನಿಖೆ ನಡೆಸಲಿದ್ದಾರೆ ಎಂದರು.