ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (IAS Officer Rohini Sindhuri) ಅವರಿಗೆ ಸಂಕಷ್ಟ ಎದುರಾಗಿದೆ. ರೋಹಿಣಿ ಸಿಂಧೂರಿ ವಿರುದ್ಧ ಬಾಲಿವುಡ್‌ನ ಖ್ಯಾತ ಗಾಯಕ ಲಕ್ಕಿ ಅಲಿ (Singer Lucky Ali) ಕರ್ನಾಟಕ ಲೋಕಾಯುಕ್ತ (Karnataka Lokayukta) ಪೊಲೀಸರಿಗೆ ದೂರು ನೀಡಿದ್ದಾರೆ.
ರೋಹಿಣಿ ಸಿಂಧೂರಿ ಪತಿ ಸುಧೀರ್ ರೆಡ್ಡಿ (Sudhir Reddy) ಮತ್ತು ಸೋದರ ಮಾವ ಮಧುಸೂದನ್ ರೆಡ್ಡಿ ತಮ್ಮ ಟ್ರಸ್ಟ್ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಲಕ್ಕಿ ಅಲಿ ಆರೋಪಿಸಿದ್ದಾರೆ. ಈ ಒತ್ತುವರಿಗೆ ರೋಹಿಣಿ ಸಿಂಧೂರಿ ಸಹಕಾರ ಕೊಟ್ಟಿರುವ ಆರೋಪ ಕೇಳಿ ಬಂದಿದೆ. ಐಎಎಸ್ ಅಧಿಕಾರಿ ರಾಜ್ಯ ಸಂಪನ್ಮೂಲಗಳನ್ನು ಬಳಸಿಕೊಂಡು ಭೂಮಿಯನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿದ್ದಾರೆ ಎಂದು ಗಾಯಕ ಲಕ್ಕಿ ಅಲಿ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.