Breaking News

ಜಿಎಸ್‌ಟಿ ಮಂಡಳಿ ಸದಸ್ಯರಾಗಿ ಕೃಷ್ಣ ಬೈರೇಗೌಡ ನೇಮಕ

Spread the love

ವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಡಿ ತೆರಿಗೆ ಪ್ರಮಾಣ ಸರಳಗೊಳಿಸಲು ರಚಿಸಿರುವ ಏಳು ಸಚಿವರನ್ನು ಒಳಗೊಂಡ ಸಮಿತಿಯನ್ನು ಪುನರ್‌ ರಚಿಸಲಾಗಿದೆ.

ಬಿಹಾರದ ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಈ ಸಮಿತಿಯ ಸಂಚಾಲಕರಾಗಿ ನೇಮಕವಾಗಿದ್ದಾರೆ.

ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ. ಮಂಡಳಿಯ ವೆಬ್‌ಸೈಟ್‌ನಲ್ಲಿ ಈ ಕುರಿತು ಅಧಿಕೃತವಾಗಿ ಪ್ರಕಟಿಸಲಾಗಿದೆ.

ಉತ್ತರಪ್ರದೇಶದ ಹಣಕಾಸು ಸಚಿವ ಸುರೇಶ್‌ ಕುಮಾರ್‌ ಖನ್ನಾ, ಗೋವಾದ ಸಾರಿಗೆ ಸಚಿವ ಮೌವಿನ್ ಗೊಡಿನ್ಹೋ, ರಾಜಸ್ಥಾನದ ವೈದ್ಯಕೀಯ ಮತ್ತು ಆರೋಗ್ಯ ಸೇವಾ ಸಚಿವ ಗಜೇಂದ್ರ ಸಿಂಗ್‌, ಪಶ್ಚಿಮ ಬಂಗಾಳದ ಹಣಕಾಸು ಸಚಿವರಾದ ಚಂದ್ರಿಮಾ ಭಟ್ಟಾಚಾರ್ಯ ಮತ್ತು ಕೇರಳದ ಹಣಕಾಸು ಸಚಿವ ಕೆ.ಎನ್‌. ಬಾಲಗೋಪಾಲ್‌ ಈ ಸಮಿತಿಯ ಉಳಿದ ಸದಸ್ಯರಾಗಿದ್ದಾರೆ.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ