Breaking News
Home / ಜಿಲ್ಲೆ / ಹಾಸನ / ಸೂರಜ್‌ ರೇವಣ್ಣಗೆ ಬ್ಲಾಕ್‌ ಮೇಲ್, ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ಯುವಕನ ವಿರುದ್ಧ ದೂರು

ಸೂರಜ್‌ ರೇವಣ್ಣಗೆ ಬ್ಲಾಕ್‌ ಮೇಲ್, ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ಯುವಕನ ವಿರುದ್ಧ ದೂರು

Spread the love

ಹಾಸನ: ವಿಧಾನ ಪರಿಷತ್ ಸದಸ್ಯ (MLC) ಡಾ. ಸೂರಜ್ ರೇವಣ್ಣಗೆ (Suraj Revanna) ಬ್ಲಾಕ್ ಮೇಲ್ ಮಾಡಲಾಗಿದ್ಯಂತೆ. ಯುವಕನೊಬ್ಬ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದು, ಐದು ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದನಂತೆ. ಇದೀಗ ಆ ಯುವಕನ ವಿರುದ್ಧ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಎಂಬುವರು ಪೊಲೀಸರಿಗೆ ದೂರು (Police Complaint) ನೀಡಿದ್ದಾರೆ.

ಸೂರಜ್‌ ರೇವಣ್ಣಗೆ ಬ್ಲಾಕ್‌ ಮೇಲ್, ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ಯುವಕನ ವಿರುದ್ಧ ದೂರು

ಸೂರಜ್ ರೇವಣ್ಣಗೆ ಯುವಕನಿಂದ ಬ್ಲಾಕ್ ಮೇಲ್

ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಯುವಕನ ವಿರುದ್ಧ ಇದೀಗ ದೂರು ನೀಡಲಾಗಿದೆ. ಲೈಂಗಿಕ ದೌರ್ಜನ್ಯ ಮಾಡಿರೋದಾಗಿ ಸುಳ್ಳು ಹೇಳೋದಾಗಿ ಬೆದರಿಸಿ, ಐದು ಕೋಟಿ ಹಣಕ್ಕೆ ಆ ಯುವಕ ಬೇಡಿಕೆ ಇಟ್ಟಿದ್ದ ಅಂತ ಆರೋಪಿಸಲಾಗಿದೆ. ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಎಂಬುವರು ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದಾರೆ.

ಅರಕಲಗೂಡು ಮೂಲದ ಯುವಕನ ವಿರುದ್ಧ ದೂರು

ಅರಕಲಗೂಡು ಮೂಲದ ಯುವಕನೊಬ್ಬ ನಿಮ್ಮ ಬಾಸ್ ಬಳಿ ಕೆಲಸ ಕೊಡಿಸು ಎಂದು ಕೇಳಿಕೊಂಡಿದ್ದ. ನೀನೇ ಹೋಗಿ ಬಾಸ್ ಭೇಟಿ ಮಾಡು ಎಂದು ಫೊನ್ ನಂಬರ್ ಕೊಟ್ಟಿದ್ದೆ ಎಂದು ದೂರಿನಲ್ಲಿ ಶಿವಕುಮಾರ್ ತಿಳಿಸಿದಿದ್ದಾರೆ.

ನನಗೆ ಹಣ ಬೇಕು ಎಂದಿದ್ದನಂತೆ ಯುವಕ

ಜೂನ್ 16ರಂದು ಗನ್ನಿಕಡದ ತೋಟದ ಮನೆಗೆ ಕೆಲಸ ಕೇಳಲು ಆ ಯುವಕ ಬಂದಿದ್ದನಂತೆ. ಕೆಲಸ ಕೇಳಿ ವಾಪಸ್ಸು ಬಂದ ಬಳಿಕ ಬ್ಲಾಕ್ ಮೇಲ್ ಮಾಡಿರೋದಾಗಿ ದೂರಿನಲ್ಲಿ ಹೇಳಲಾಗಿದೆ. ನೀನು ಕೆಲಸ ಕೊಡಿಸಲ್ಲ, ನಿಮ್ಮ ಬಾಸೂ ಕೆಲಸ ಕೊಡಿಸ್ತಿಲ್ಲ. ನನಗೆ ತುಂಬಾ ಕಷ್ಟ ಇದೆ, ನನಗೆ ಹಣ ಬೇಕು ಅಂತ ಯುವಕ ಹೇಳಿದ್ದನಂತೆ.

ಲೈಂಗಿಕ ದೌರ್ಜನ್ಯದ ಆರೋಪ ಮಾಡೋ ಬೆದರಿಕೆ

ನೀನು ನಿಮ್ಮ ಬಾಸ್‌ನಿಂದ ಐದು ಕೋಟಿ ಹಣ ಕೊಡಿಸದಿದ್ದರೆ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ಕೊಡ್ತೇನೆ ಎಂದು ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಈ ವಿಚಾರವನ್ನು ನಾನು ನಮ್ಮ ಬಾಸ್‌ಗೆ ತಿಳಿಸಿದೆ. ಆತ ಕೆಲಸ ಕೇಳಿಕೊಂಡು ಮನೆಗೆ ಬಂದಾಗ ಭದ್ರತೆಗಾಗಿ ಇದ್ದ ಪೊಲೀಸ್ ಸೇರಿ ಹಲವಾರು ಜನರು ಇದ್ದರು ಅಂತ ದೂರಿನಲ್ಲಿ ಹೇಳಲಾಗಿದೆ.

ನಾನೇನು ತಪ್ಪು ಮಾಡಿಲ್ಲ, ಯಾಕೆ ಹಣ ಕೊಡಬೇಕು?

ನಾನೇನು ತಪ್ಪು ಮಾಡಿಲ್ಲ, ಹೀಗಾಗಿ ಯಾಕೆ ಹಣ ಕೊಡಬೇಕು ಎಂದು ಬಾಸ್ ಹೇಳಿದ್ರು ಎಂದು ದೂರಿನಲ್ಲಿ ಪ್ರಸ್ತಾಪಿಸಲಾಗಿದೆ. ನಂತರ ಜೂನ್ 18 ರಂದು ಹಾಸನದ ಜಿಲ್ಲಾಸ್ಪತ್ರೆಗೆ ಬಂದು ಆಸ್ಪತ್ರೆ ಚೀಟಿಗೆ ಎಂಎಲ್ ಸಿ ಸೀಲ್ ಹಾಕಿಸಿ ಫೋಟೊ ಹಾಕಿ ಬೆದರಿಕೆ ಹಾಕಿದ್ದಾನಂತೆ. ಮೆಡಿಕೊ ಲೀಗಲ್ ಕೇಸ್ ಸೀಲ್ ಇರೋ ಆಸ್ಪತ್ರೆ ಚೀಟಿ ತೋರಿಸಿ ಮತ್ತೆ ಹಣಕ್ಕಾಗಿ ಡಿಮ್ಯಾಂಡ್ ಇಟ್ಟಿದ್ದಾನೆ ಅಂತ ದೂರಿನಲ್ಲಿ ಹೇಳಲಾಗಿದೆ.

ಮೊದಲು 5 ಕೋಟಿ, 3 ಕೋಟಿ, 2.5 ಕೋಟಿಗೆ ಬೇಡಿಕೆ

ಮೊದಲು ಐದು ಕೋಟಿ ಕೊಡುವಂತೆ ಬೇಡಿಕೆ ಇಟ್ಟಿದ್ದಾನಂತೆ. ಬಳಿಕ ಮೂರು ಕೋಟಿ ಕೇಳಿದ್ನಂತೆ. ಕೊನೆಗೆ ಎರಡೂವರೆ ಕೋಟಿಯಾದ್ರೂ ಹಣ ಕೊಡಿಸು ಎಂದು ಯುವಕ ಡಿಮ್ಯಾಂಡ್ ಮಾಡಿದ್ದಾನಂತೆ.

ಹಣ ಕೊಡಿಸದಿದ್ದರೆ ಕುಟುಂಬದ ಗೌರವ ಹಾಳು ಮಾಡೋ ಬೆದರಿಕೆ

ಹಣ ಕೊಡಿಸದಿದ್ದರೆ ದೊಡ್ಡ ಕುಟುಂಬವಾದ ಅವರ ಮರ್ಯಾದೆ ಕಳೆಯುತ್ತೇನೆ ಎಂದು ಬ್ಲಾಕ್ ಮೇಲ್ ಮಾಡಿದ್ದಾನಂತೆ. ನಿಮ್ಮ ಬಾಸ್ ಹಣ ಕೊಡದಿದ್ದರೆ ದೊಡ್ಡ ದೊಡ್ಡೋರು ಹಣ ಕೊಡಲು ರೆಡಿ ಇದ್ದಾರೆ. ನಾನು ಬೆಂಗಳೂರಿಗೆ ಹೋಗಿ ಮಾಧ್ಯಮದ ಮುಂದೆ ಹೋಗ್ತೇನೆ. ಸೂರಜ್ ರೇವಣ್ಣ ಗೌರವ ಹಾಳು ಮಾಡೋದಾಗಿ ಬೆದರಿಕೆ ಹಾಕಿದ್ರು ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ದೂರಿನಲ್ಲಿ ಆರೋಪಿಸಿದ್ದಾರೆ.

ದೂರು ದಾಖಲಿಸಿಕೊಂಡ ಪೊಲೀಸರು

ಸುದೀರ್ಘ ದೂರು ಬರೆದು ಅರಕಲಗೂಡು ಮೂಲದ ಯುವಕನ ಬಗ್ಗೆ ಬ್ಲಾಕ್ ಮೇಲ್ ಆರೋಪ ಮಾಡಿರೋವನ್ನು ಶಿವಕುಮಾರ್ ಮಾಡಿದ್ದಾರೆ. ಇದೀಗ ಶಿವಕುಮಾರ್ ದೂರು ಆಧರಿಸಿ ಹೊಳೆನರಸೀಪುರ ನಗರಠಾಣೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಅಜಾನ್ ವಿರುದ್ಧ ಜೂನ್ 1ರಿಂದ ಮತ್ತೆ ಹೋರಾಟ: ಮುತಾಲಿಕ್

Spread the love ಹಾಸನ, ಮೇ 22: “ಅಜಾನ್ ವಿಷಯದಲ್ಲಿ ಸರ್ಕಾರ ದೃಢ ನಿಲುವಿನೊಂದಿಗೆ ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯಾದ್ಯಂತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ