Breaking News

ಪ್ರಜ್ವಲ್ ಬೆನ್ನಲ್ಲೇ ಅಣ್ಣ ಸೂರಜ್‌ ರೇವಣ್ಣನ ಮೇಲೆ ಅತ್ಯಾಚಾರ ಆರೋಪ

Spread the love

ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಬರೀ ರಾಜ್ಯ, ದೇಶ ಅಲ್ಲದೆ, ವಿಶೇಶಗಳವರೆಗೂ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ಪ್ರಜ್ವಲ್ ರೇವಣ್ಣ ಅಣ್ಣ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧವೂ ಸಹ ಅಸಹಜ ಲೈಂಗಿಕ ದೌರ್ಜನ್ಯ ಆರೋಪವೊಂದು ಕೇಳಿಬಂದಿದೆ.

Suraj Revanna: ಪ್ರಜ್ವಲ್ ಬೆನ್ನಲ್ಲೇ ಅಣ್ಣ ಸೂರಜ್‌ ರೇವಣ್ಣನ ಮೇಲೆ ಅತ್ಯಾಚಾರ ಆರೋಪ

ಸೂರಜ್‌ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಅರಕಲಗೂಡು ಜೆಡಿಎಸ್​ ಕಾರ್ಯಕರ್ತನ ಮೇಲೆ ಸೂರಜ್​ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈಗಾಗಲೇ ಪ್ರಜ್ವಲ್‌ ರೇವಣ್ಣ ಅವರ ಪ್ರಕರಣದಿಂದ ಮುಜುಗರಕ್ಕೀಡಾಗಿದ್ದ ರೇವಣ್ಣ ಕುಟುಂಬ ಮತ್ತಷ್ಟು ಮುಜುರಕ್ಕೆ ಒಳಗಾಗುವಂತಾಗಿದೆ.

ಇನ್ನು ಸಂತ್ರಸ್ತ ಯುವಕ ಸಿಎಂ, ಗೃಹ ಸಚಿವ ಹಾಗೂ ಡಿಜಿ ಮತ್ತು ಐಜಿಗೆ ದೂರು ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇನ್ನೂ ಮುಂದಿನ ದಿನಗಳಲ್ಲಿ ಈ ಪ್ರಕರಣ ಯಾವ ಹಂತಕ್ಕೆ ಹೋಗಲಿದೆ ಎಂದು ಕಾದುನೋಡಬೇಕಿದೆ.

ಎಚ್‌.ಡಿ.ರೇವಣ್ಣ ಅವರ ಮಗ ಸೂರಜ್ ರೇವಣ್ಣ ಅವರು ಜೂನ್ 16ರ ರಾತ್ರಿ ತಮ್ಮ ಪಕ್ಷದ ಕಾರ್ಯಕರ್ತನನ್ನು ಸಹಾಯ ಮಾಡುವುದಾಗಿ ಚನ್ನಪಟ್ಟಣ ತಾಲ್ಲೂಕಿನ ಗನ್ನಿಕಡದ ತೋಟದ ಮನೆಗೆ ಕರೆಯಿಸಿಕೊಂಡಿದ್ದು, ಈ ವೇಳೆ ಆತನ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನುವ ಗಂಭೀರ ಆರೋಪ ಇದೆ.

ಅಲ್ಲದೆ, ಈಗಾಗಲೇ ಬಲವಂತವಾಗಿ ತನ್ನ ಮೇಲೆ ದೌರ್ಜನ್ಯ ನಡೆಸಿರುವ ಬಗ್ಗೆ ಜೆಡಿಎಸ್​ ಕಾರ್ಯಕರ್ತ, ಸಿಎಂ, ಗೃಹ ಸಚಿವರು, ಡಿಜಿ ಮತ್ತು ಐಜಿಪಿ ಮತ್ತು ಹಾಸನ ಎಸ್ಪಿಗೆ ದೂರು ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.


Spread the love

About Laxminews 24x7

Check Also

ಆರ್​​ಎಸ್​​ಎಸ್ ಎದುರು ಹಾಕಿಕೊಂಡಿದ್ದೀರಿ, ನೀವು ಸುಟ್ಟು ಭಸ್ಮ ಆಗ್ತೀರಿ : ಶೆಟ್ಟರ್

Spread the loveಹುಬ್ಬಳ್ಳಿ : ಆರ್​​ಎಸ್​​ಎಸ್ ಸಂಘಟನೆಯನ್ನು ಎದುರು ಹಾಕಿಕೊಂಡಿದ್ದೀರಿ, ನೀವು ಸುಟ್ಟು ಭಸ್ಮ ಆಗ್ತೀರಿ. ಇದು ನಿಮ್ಮ ಅಂತ್ಯದ ಆರಂಭ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ