ಬಳ್ಳಾರಿ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ವಹಿಸಿಕೊಳ್ಳುವಂತೆ ಜಮೀರ್ ಅಹಮದ್ ಖಾನ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ವಿಜಯನಗರ ಜಿಲ್ಲಾ ಕೆಡಿಪಿ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ಧಿಗಾರರ ಜತೆ ಮಾತನಾಡಿದ ಅವರು, ‘ವಿಜಯನಗರದ ಜತೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ಜಮೀರ್ ಅಹಮದ್ ಖಾನ್ ಅವರಿಗೆ ನೀಡಲಾಗುವುದು’ ಎಂದು ಹೇಳಿದರು.
‘ಈ ಕುರಿತು ಅಧಿಕೃತ ಹೊರಡಿಸಲಾಗುವುದು’ ಎಂದ ಅವರು, ತಕ್ಷಣದಿಂದಲೇ ಹೊಣೆಗಾರಿಕೆ ತೆಗೆದುಕೊಳ್ಳುವಂತೆ ಜಮೀರ್ ಅಹಮದ್ ಖಾನ್ ಅವರಿಗೂ ನಿರ್ದೇಶನ ನೀಡಿದರು.
ನಾಗೇಂದ್ರ ರಾಜೀನಾಮೆಯಿಂದ ಬಳ್ಳಾರಿ ಜಿಲ್ಲಾ ಉಸ್ತುವಾರಿ ತೆರವಾಗಿತ್ತು.
Laxmi News 24×7