Breaking News

ಕೊಲೆಗೆ ಸಂಚು; ಆರು ಮಂದಿ ಬಂಧನ

Spread the love

ಹುಬ್ಬಳ್ಳಿ: ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆಗೆ ಸಂಚು ರೂಪಿಸಿದ್ದ ತಂಡವೊಂದನ್ನು ಹಳೇಹುಬ್ಬಳ್ಳಿ ಪೊಲೀಸರು ಬಂಧಿಸಿ, ಎರಡು ತಲ್ವಾರ್‌, ಎರಡು ಚಾಕು, ಎರಡು ಬೈಕ್‌ ಹಾಗೂ ಆಟೊ ವಶಪಡಿಸಿಕೊಂಡಿದ್ದಾರೆ.

ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಸೇರಿ ಹಳೇಹುಬ್ಬಳ್ಳಿ ನಿವಾಸಿಗಳಾದ ಮಂಜುನಾಥ ಪಾಂಚಾನ, ಪವನ ಗಬ್ಬೂರ, ವಿನಾಯಕ ದುಂಡಿ, ನಾಗರಾಜ ಮೀರಜಕರ, ರಾಜಪ್ಪ ಹನಮನಹಳ್ಳಿ ಬಂಧಿತರು.ಕೊಲೆಗೆ ಸಂಚು; ಆರು ಮಂದಿ ಬಂಧನ

ಮತ್ತೊಬ್ಬ ಆರೋಪಿ ಗಣೇಶ ಬಿಲಾನಾ ತಲೆಮರೆಸಿಕೊಂಡಿದ್ದಾನೆ.

ಹಳೇಹುಬ್ಬಳ್ಳಿಯ ಸಿಕ್ಕಲಗಾರ ಓಣಿಯ ನಿವಾಸಿ ದೀಪಕ ಧಾರವಾಡ ಅವರನ್ನು ಕೊಲೆ ಮಾಡಲು ಸಂಚು ರೂಪಿಸಲಾಗಿತ್ತು ಎಂದು ಜೂನ್‌ 19ರಂದು ಪ್ರಕರಣ ದಾಖಲಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಮಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ ತಿಮ್ಮಸಾಗರ ಓಣಿಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ