Breaking News

ಭಾರಿ ಮಳೆಗೆ ಕುಸಿದು ಬಿದ್ದ ಹೆದ್ದಾರಿ ಬದಿ ತಡೆಗೋಡೆ. ತಪ್ಪಿದ ದುರಂತ

Spread the love

ಣಜಿ: ಕಳೆದ 2 ದಿನಗಳಿಂದ ಗೋವಾದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಭಾರೀ ಮಳೆಯಿಂದಾಗಿ ಗೋವಾದ ಹಲವೆಡೆ ರಸ್ತೆಯಲ್ಲಿ ಹಾಗೂ ಮನೆಗಳ ಮೇಲೆ ಮರಗಳು ಬಿದ್ದಿವೆ. ಪೆಡ್ನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಣಾ ಗೋಡೆ ಕುಸಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಅಥವಾ ಇತರೆ ಹಾನಿಯಾಗಿಲ್ಲ ಎನ್ನಲಾಗಿದೆ.

 

ಜೋರು ಮಳೆಯಾದರೆ ಈ ತಡೆಗೋಡೆ ಉಳಿಯುವುದಿಲ್ಲ ಎಂಬ ಮಾತು ಸ್ಥಳೀಯರಲ್ಲಿ ಆಗಲೇ ಇತ್ತು. ಬರುವ ಮಳೆಗಾಲದ ಒಳಗಾಗಿ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳಲಿದ್ದು, ಎಂವಿಆರ್ ಇನ್‍ಫ್ರಾ ಒಟ್ಟಾರೆ ಕಾರ್ಯನಿರ್ವಹಣೆಯ ಬಗ್ಗೆ ಅನುಮಾನದ ಮಾತುಗಳು ಕೇಳಿಬರುತ್ತಿದೆ. ರಸ್ತೆಯ ತಡೆಗೋಡೆ ಕುಸಿತದ ಸಂದರ್ಭದಲ್ಲಿ ಅದೃಷ್ಟವಶಾತ್ ಈ ಸ್ಥಳಕ್ಕೆ ಬಂದ ನಾಲ್ಕು ಚಕ್ರದ ವಾಹನಕ್ಕೆ ಯಾವುದೇ ಅಪಘಾತ ಸಂಭವಿಸಿಲ್ಲ. ಆದರೆ ಒಟ್ಟಾರೆ ಪರಿಸ್ಥಿತಿ ನೋಡಿದರೆ ಮುಂದಿನ ದಿನಗಳಲ್ಲಿ ಇಂತಹ ಹಲವು ಘಟನೆಗಳು ಸಂಭವಿಸಿ ಪ್ರಯಾಣಿಕರ ಜೀವಕ್ಕೆ ಅಪಾಯ ಎದುರಾಗಬಹುದು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಎರಡು ದಿನಗಳಲ್ಲಿ, ಉತ್ತರ ಗೋವಾ ಮತ್ತು ಅದರಂತೆ ಗ್ರಾಮೀಣ ಭಾಗದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಲವು ಸ್ಥಳಗಳಲ್ಲಿ ಮರಗಳು ನೆಲಕ್ಕುರುಳಿದೆ. ಇದರಿಂದ ಕೆಲವೆಡೆ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಮರಗಳು ಬಿದ್ದು ಹಲವು ಮನೆಗಳಿಗೂ ಹಾನಿಯಾಗಿದೆ. ಪೆಡ್ನೆ ಅಗ್ನಿಶಾಮಕ ದಳದ ಸಿಬ್ಬಂದಿ ಈ ಎಲ್ಲ ಮರಗಳನ್ನು ಕಡಿದು ಸಂಚಾರಕ್ಕೆ ಅನುವು ಮಾಡಿಕೊಟ್ಟರು.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ