Breaking News

ಇಂದು ರಾಜ್ಯದಲ್ಲಿ 1,704 ಮಂದಿಗೆ ಸೋಂಕು13 ಮಂದಿ ಮೃತ

Spread the love

ಬೆಂಗಳೂರು: ಇಂದು ರಾಜ್ಯದಲ್ಲಿ 1,704 ಮಂದಿಗೆ ಸೋಂಕು ತಗುಲಿದ್ದು, 1,537 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು ಒಟ್ಟು 13 ಮಂದಿ ಮೃತಪಟ್ಟಿದ್ದಾರೆ.

 

ಒಟ್ಟು ಸೋಂಕಿತರ ಸಂಖ್ಯೆ 8,73,046ಕ್ಕೆ ಏರಿಕೆಯಾಗಿದೆ. ಈ ಪೈಕಿ 8,36,505 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪ್ರಸ್ತುತ 24,868 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ ಒಟ್ಟು 11,654 ಮಂದಿ ಸೋಂಕಿಗೆ ಮೃತಪಟ್ಟಿದ್ದು, 470 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಒಟ್ಟು 20,399 ಆಂಟಿಜನ್ ಟೆಸ್ಟ್, 1,06,505 ಆರ್‍ಟಿ ಪಿಸಿಆರ್ ಇತ್ಯಾದಿ ಪರೀಕ್ಷೆ ಮಾಡಿದ್ದು, ಒಟ್ಟು 1,26,904 ಕೊರೊನಾ ಪರೀಕ್ಷೆಗಳನ್ನು ಮಾಡಲಾಗಿದೆ. ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 1,02,33,378 ಕೊರೊನಾ ಪರೀಕ್ಷೆಗಳನ್ನು ಮಾಡಲಾಗಿದೆ.

ಬೆಂಗಳೂರು ನಗರದಲ್ಲಿ 1,039 ಮಂದಿಗೆ ಸೋಂಕು ಬಂದಿದ್ದು, ಇಂದು 10 ಮಂದಿ ಮೃತಪಟ್ಟಿದ್ದಾರೆ. ಮೈಸೂರು 100, ದಕ್ಷಿಣ ಕನ್ನಡದಲ್ಲಿ 46, ಹಾಸನ 44, ಬೆಂಗಳೂರು ಗ್ರಾಮಾಂತರದಲ್ಲಿ 41 ಜನರಲ್ಲಿ ಸೋಂಕು ಪತ್ತೆಯಾದರೆ, ರಾಯಚೂರು, ಬೆಳಗಾವಿ ಹಾಗೂ ಮಂಡ್ಯದಲ್ಲಿ ತಲಾ 32 ಮಂದಿಗೆ ಸೋಂಕು ಬಂದಿದೆ.

ಒಟ್ಟು 470 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ ಬೆಂಗಳೂರು ನಗರ 237, ಮೈಸೂರು 27, ತುಮಕೂರು 29, ಕಲಬುರಗಿ 17, ಬಳ್ಳಾರಿಯಲ್ಲಿ 16 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


Spread the love

About Laxminews 24x7

Check Also

ಏಕಾಏಕಿ ಫೀಸ್​​ ಹೆಚ್ಚಳ: ಶಾಲೆಗೆ ಮುತ್ತಿಗೆ ಹಾಕಿದ ಪೋಷಕರು 

Spread the loveದೇವನಹಳ್ಳಿ, ಏಪ್ರಿಲ್​ 09: ಕರ್ನಾಟಕದಲ್ಲಿ ಈಗಾಗಲೇ ಅಗತ್ಯ ದಿನ ಬಳಕೆಯ ವಸ್ತುಗಳಾದ ಹಾಲು, ಗ್ಯಾಸ್​​, ಪೆಟ್ರೋಲ್​, ಡಿಸೇಲ್​ ಸೇರಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ