ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಜೂನ್ 27 ರಂದು ರಾಜ್ಯದ ಸಂಸದರ ಸಭೆ ಕರೆದಿದ್ದಾರೆ. ಜೂನ್ 27ರಂದು ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸದಾಗಿ ಆಯ್ಕೆಯಾದ ರಾಜ್ಯದ ಸಂಸದರಿಗೆ ಔತಣಕೂಟ ಆಯೋಜಿಸಿದ್ದಾರೆ.

ಜೂನ್ 27ರಂದು ಸಂಜೆ ಔತಣಕೂಟ ಆಯೋಜಿಸಿದ್ದು, ರಾಜ್ಯದ ಪರ ಧ್ವನಿ ಎತ್ತುವಂತೆ ಸಂಸದರಿಗೆ ಮುಖ್ಯಮಂತ್ರಿಗಳು ಮನವಿ ಮಾಡಲಿದ್ದಾರೆ.
ಕೇಂದ್ರದಿಂದ ರಾಜ್ಯಕ್ಕೆ ಆಗಬೇಕಾದ ಕೆಲಸಗಳ ಅಹವಾಲು ಪಟ್ಟಿಯನ್ನು ಸಲ್ಲಿಸಲಿದ್ದಾರೆ. ರಾಜ್ಯದ ಸಂಸದರು ಮತ್ತು ಕೇಂದ್ರ ಸಚಿವರಿಗೆ ರಾಜ್ಯ ಸರ್ಕಾರದ ವತಿಯಿಂದ ಪಟ್ಟಿ ಸಲ್ಲಿಸಲಿದ್ದು, ರಾಜ್ಯದ ಅಭಿವೃದ್ಧಿಗೆ ಕೈಜೋಡಿಸುವಂತೆ ಮನವಿ ಮಾಡಲಾಗುವುದು.
Laxmi News 24×7