ಖಾನಾಪುರ: ಪಟ್ಟಣದ ಹೊರವಲಯದ ಬೆಳಗಾವಿ ರಸ್ತೆಯ ಮರೆಮ್ಮ ದೇವಾಲಯದ ಬಳಿ ಶುಕ್ರವಾರ ರಾತ್ರಿ ಲಾರಿ ಹಿಂದಿನ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಮೃತಪಟ್ಟಿದ್ದಾರೆ.
ತಾಲ್ಲೂಕಿನ ಹಲಕರ್ಣಿ ನಿವಾಸಿ ಸಂಜು ಮಲ್ಲಪ್ಪ ಸತನಾಯ್ಕ (35) ಮೃತರು. ಪಟ್ಟಣದಿಂದ ಬೆಳಗಾವಿ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಲಾರಿಯನ್ನು ಓವರ್‌ಟೇಕ್ ಮಾಡಲು ಹೀಗಿ, ಎದುರಿಗೆ ಬಂದ ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆದು, ಲಾರಿಯ ಹಿಂದಿನ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.
ಮತ್ತೊಂದು ಬೈಕ್‌ನಲ್ಲಿದ್ದ ಗಂಗವಾಳಿ ಗ್ರಾಮದ ತುಕಾರಾಮ ಸುತಾರ ಮತ್ತು ಅವರ ಪತ್ನಿ ಸಾರಿಕಾ ಅವರಿಗೆ ಗಾಯಗಳಾಗಿವೆ.
ಖಾನಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7