Breaking News

ಉಪಮುಖ್ಯಮಂತ್ರಿ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ; ಜಮೀರ್ ಅಹ್ಮದ್

Spread the love

ಬೆಂಗಳೂರು: ರಾಜ್ಯದಲ್ಲಿ ಮೂವರು ಉಪ ಮುಖ್ಯಮಂತ್ರಿಗಳ ಸ್ಥಾನ ಸೃಷ್ಟಿ ಬಗ್ಗೆ ಮತ್ತೆ ಚರ್ಚೆ ಆರಂಭವಾಗಿದೆ. ಸಚಿವ ಸತೀಶ ಜಾರಕಿಹೊಳಿ ಅವರು, ಉಪ ಮುಖ್ಯಮಂತ್ರಿ ಹುದ್ದೆ ಕುರಿತಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ಮತ್ತಿಬ್ಬರು ಪ್ರಭಾವಿ ಸಚಿವರಾದ ಜಮೀರ್ ಅಹ್ಮದ್ ಮತ್ತು ಕೆ.ಎನ್.

ರಾಜಣ್ಣ ಕೂಡ ಉಪಮುಖ್ಯಮಂತ್ರಿ ವಿಚಾರವಾಗಿ ಪ್ರಸ್ತಾಪ ಮಾಡಿದ್ದಾರೆ.

ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೆ ಭುಗಿಲೆದ್ದ 'ಉಪ ಮುಖ್ಯಮಂತ್ರಿ' ವಿಚಾರ

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಮೂವರು ಡಿಸಿಎಂ ಮಾಡಿದರೆ ತೊಂದರೆ ಏನು? ರಾಜ್ಯದಲ್ಲಿ ಮೂರು ಉಪಮುಖ್ಯಮಂತ್ರಿ ಸ್ಥಾನ ಸೃಷ್ಟಿಸುವಂತೆ ಮೊದಲಿನಿಂದ ಹೇಳುತ್ತಿದ್ದೇನೆ. ಚುನಾವಣೆ ಕಾರಣಕ್ಕೆ ಇದನ್ನು ಪ್ರಸ್ತಾಪಿಸದಂತೆ ಎಐಸಿಸಿ ವರಿಷ್ಠರು ತಿಳಿಸಿದ್ದರು. ಅದಕ್ಕಾಗಿ ಸುಮ್ಮನಿದ್ದೆವು ಎಂದು ಹೇಳಿದ್ದಾರೆ.

ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ನನ್ನ ಸಹಮತ ಇದೆ. ಮೂರು ಡಿಸಿಎಂ ಹುದ್ದೆ ಸೃಷ್ಟಿಯಿಂದ ಯಾರಿಗೂ ತೊಂದರೆ ಆಗುವುದಿಲ್ಲ ಎಂದು ರಾಜಣ್ಣ ಹೇಳಿದ್ದಾರೆ

ವಿಜಯಪುರದಲ್ಲಿ ಮಾತನಾಡಿದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಉಪಮುಖ್ಯಮಂತ್ರಿ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ. ಎಲ್ಲಾ ಸಮಾಜಕ್ಕೂ ತಮ್ಮ ಸಮಾಜದವರಿಗೆ ಉಪ ಮುಖ್ಯಮಂತ್ರಿ ಸ್ಥಾನ ಸಿಗಬೇಕು ಎನ್ನುವ ಹಂಬಲ ಇರುತ್ತದೆ. ಮುಸ್ಲಿಂ ಸೇರಿದಂತೆ ಲಿಂಗಾಯಿತ, ದಲಿತ ಸಮಾಜಗಳಿಂದಲೂ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಇದ್ದು, ನಾವು ಕೂಡ ಉಪಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದೇವೆ ಎಂದು ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.


Spread the love

About Laxminews 24x7

Check Also

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ ಲಘು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ