ಬೆಂಗಳೂರು : ಜೆಡಿಎಸ್ ಕಾರ್ಯಕರ್ತನ ಮೇಲೆ ಸಲಿಂಗಕಾಮದ ಆರೋಪದ ಮೇಲೆ ಅರೆಸ್ಟ್ ಆಗಿರುವ ಪರಿಷತ್ ಸದಸ್ಯ ಸೂರಜ್ ರೇವಣ್ಣ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಇವರು. ರೇವಣ್ಣ ಕುಟುಂಬದ ಮತ್ತೊಂದು ಪ್ರಕರಣ ಸಧ್ಯ ರಾಜ್ಯದಲ್ಲಿ ಕುತೂಹಲ ಮೂಡಿಸಿದೆ. ಸಲಿಂಗಕಾಮದ ಆರೋಪದ ಮೇಲೆ ಶನಿವಾರ ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರು ವಿಚಾರಣೆಗೆ ಬಂದಾಗ ವಶಕ್ಕೆ ಪಡೆದುಕೊಂಡಿದ್ದಾರೆ.
ಸೂರಜ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಆದೇಶ ಮಾಡಲಾಗಿದ್ದು, ಹಾಸನ ಜಿಲ್ಲಾ ಎಸ್‌ಪಿ ಅವರಿಗೆ ಎಡಿಜಿಪಿ ಆರ್. ಹಿತೇಂದ್ರ ಆದೇಶಿಸಿದ್ದಾರೆ. ಆದೇಶದಲ್ಲಿ ಖುದ್ದು ಸಿಐಡಿಗೆ ತೆರಳಿ ಕೇಸ್ ಫೈಲ್ ಮಾಡಲು ಸೂಚಿಸಿದ್ದಾರೆ. ಅಲ್ಲದೆ ತನಿಖೆಗೆ ಎಲ್ಲ ತಯಾರಿ ಮಾಡಿಕೊಳ್ಳಲು ಸೂಚನೆ ನೀಡಿಲಾಗಿದೆ.