Breaking News

ಸೋಮವಾರದಿಂದ ಲೋಕಸಭೆ ಅಧಿವೇಶನ: ಸ್ಪೀಕರ್ ಯಾರು?

Spread the love

ವದೆಹಲಿ, ಜೂನ್ 23: ಲೋಕಸಭೆ ಚುನಾವಣೆ 2024ರ ಬಳಿಕ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. 18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24ರ ಸೋಮವಾರ ಆರಂಭವಾಗಲಿದೆ. ಲೋಕಸಭೆ ಸದಸ್ಯರ ಪ್ರಮಾಣ ವಚನ ಎರಡು ದಿನಗಳ ಕಾಲ ನಡೆಯಲಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಬಿಜೆಪಿ ನಾಯಕ ಮತ್ತು 7 ಅವಧಿಗೆ ಸದಸ್ಯರಾಗಿ ಆಯ್ಕೆಯಾದ ಭರ್ತೃಹರಿ ಮಹತಾಬ್ ಅವರನ್ನು ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಆಯ್ಕೆ ಮಾಡಿದ್ದಾರೆ.

ನೂತನ ಸದಸ್ಯರ ಪ್ರಮಾಣ ವಚನ ಹಂಗಾಮಿ ಸ್ಪೀಕರ್ ನೇತೃತ್ವದಲ್ಲಿಯೇ ನಡೆಯಲಿದೆ.

ಜೂನ್ 26ರಂದು ಲೋಕಸಭೆ ನೂತನ ಸ್ಪೀಕರ್ ಆಯ್ಕೆಗೆ ಚುನಾವಣೆ, ಜೂನ್ 27ರಂದು ಲೋಕಸಭೆ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ಹಂಗಾಮಿ ಸ್ಪೀಕರ್ ಆಯ್ಕೆ ವಿಚಾರ ಕಲಾಪದಲ್ಲಿ ಕೋಲಾಹಲ ಎಬ್ಬಿಸುವ ನಿರೀಕ್ಷೆ ಇದೆ.


Spread the love

About Laxminews 24x7

Check Also

ಪರಿಶಿಷ್ಟ ಸಮುದಾಯದ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಸ್ಪಂದಿಸಲು ಅಧಿಕಾರಿಗಳಿಗೆ ಸೂಚನೆ.

Spread the loveಯರಗಟ್ಟಿ: ತಾಲೂಕು ಆಡಳಿತ,ತಾಲೂಕ ಪಂಚಾಯತ್ ಸವದತ್ತಿ, ಸಮಾಜ ಕಲ್ಯಾಣ ಇಲಾಖೆ ಇವರ ಆಶ್ರಯದಲ್ಲಿ ತಾಲೂಕಿನ ಪರಿಶಿಷ್ಟ ಜಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ