ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿ ಯೂರಪ್ಪ ಅವರು ರವಿವಾರ ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.
ಅವರು ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಯಾಗಿ ಮಾತುಕತೆ ನಡೆಸಿದರು.
ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪ ಸಿಂಹ ನಾಯಕ್, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಸಹಿತ ಪ್ರಮುಖರು ಜತೆಗಿದ್ದರು.
ಬಳಿಕ ಕ್ಷೇತ್ರದ ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ತಂಗಿದ ಯಡಿಯೂ ರಪ್ಪ ಅವರು ಸೋಮವಾರ ಬೆಳಗ್ಗೆ 6.30ಕ್ಕೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಮಾಡಿ ಬಳಿಕ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ, ಕುಕ್ಕೆ ಸುಬ್ರಹ್ಮಣ್ಯ ತೆರಳಲಿರುವರು.
ಬಿಎಸ್‌ವೈ ಇಂದು ಸುಳ್ಯಕ್ಕೆ
ಬಿ.ಎಸ್. ಯಡಿಯೂರಪ್ಪ ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಳಿಕ 2 ಗಂಟೆಗೆ ಸುಳ್ಯಕ್ಕೆ ತೆರಳಲಿದ್ದಾರೆ. ಸುಳ್ಯದಲ್ಲಿ ಅವರು ಪಕ್ಷದ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಸುಳ್ಯದ ಕಾರ್ಯಕ್ರಮ ಮುಗಿಸಿ 3 ಗಂಟೆಗೆ ಗುಂಡ್ಯ, ಹಾಸನ ಮಾರ್ಗವಾಗಿ ಬೆಂಗಳೂರಿಗೆ ತೆರಳುವರು ಎಂದು ತಿಳಿಸಲಾಗಿದೆ.