ಮಗುವಿಗೆ ಜನ್ಮ ನೀಡಿದ ಬೆನ್ನಲ್ಲೇ ಮಹಿಳೆ ಮೃತ್ಯು.. ಆಸ್ಪತ್ರೆ ಮುಂದೆ ಕುಟುಂಬಸ್ಥರ ಪ್ರತಿಭಟನೆ
ಬಾಗಲಕೋಟೆ: ಹೆಣ್ಣು ಮಗುವಿಗೆ ಜನ್ಮ ನೀಡಿದ ಬೆನ್ನಲ್ಲೇ ಮಹಿಳೆ ಮೃತಪಟ್ಟ ಘಟನೆ ಬಾಗಲಕೋಟೆಯ ಬೀಳಗಿ ಪಟ್ಟಣದಲ್ಲಿ ಸೋಮವಾರ ನಡೆದಿದೆ.
ಮೃತ ಮಹಿಳೆಯನ್ನು ಜಾನಮಟ್ಟಿ ಲಮಾಣಿ ತಾಂಡಾ 1 ಗ್ರಾಮದ ಲಕ್ಷ್ಮೀ ಅಪ್ಪಾಲಾಲ ಲಮಾಣಿ (28) ಎನ್ನಲಾಗಿದೆ.
ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೀಳಗಿ ಪಟ್ಟಣದಲ್ಲಿರುವ ಬಸವ ಪಾಲಿ ಕ್ಲಿನಿಕ್ ಖಾಸಗಿ ಆಸ್ಪತ್ರೆ ದಾಖಲಿಸಿದ್ದಾರೆ, ಅದರಂತೆ ಬೆಳಿಗ್ಗೆ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಹೆರಿಗೆ ಬಳಿಕ ತೀವ್ರ ರಕ್ತಸ್ರಾವದಿಂದ ಮೃತಪಟ್ಟ ಮಹಿಳೆ ಮೃತಪಟ್ಟಿದ್ದಾರೆ, ಇದರಿಂದ ಕೋಪಗೊಂಡ ಮಹಿಳೆಯ ಕುಟುಂಬಸ್ಥರು ವೈದ್ಯರ ನಿರ್ಲಕ್ಷದಿಂದ ಮಹಿಳೆ ಮೃತಪಟ್ಟಿರುವುದಾಗಿ ಆರೋಪಿಸಿ ಆಸ್ಪತ್ರೆ ಮುಂಭಾಗದಲ್ಲಿ ಮಹಿಳೆಯ ಶವ ಇರಿಸಿ ಪ್ರತಿಭಟನೆ ನಡೆಸಿದ್ದಾರೆ.
ನ್ಯಾಯ ಸಿಗೋವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯಲ್ಲ ಎಂದು ಕುಟುಂಬಸ್ಥರು ಹೇಳಿದ್ದಾರೆ, ಅಲ್ಲದೆ ಮಹಿಳೆ ಮೃತಪಟ್ಟ ವಿಚಾರ ಗೊತ್ತಾಗುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.