Breaking News

ಯುವತಿಯಿಂದ 18 ಲಕ್ಷ ರೂ. ಪಡೆದು ವಂಚಿಸಿದ ಕಾನ್ಸ್‌ಟೇಬಲ್‌

Spread the love

ಮುಂಡಗೋಡ : ಮನೆ ಕಟ್ಟಲು ಹಣದ ಅವಶ್ಯಕತೆಯಿದೆ ಎಂದು ಯುವತಿಯೊಬ್ಬಳಿಗೆ ನಂಬಿಸಿ, ಮೋಸದಿಂದ 18 ಲಕ್ಷ ರೂಪಾಯಿ ಪಡೆದುಕೊಂಡು ವಂಚಿಸಿದ ಆರೋಪದ ಮೇಲೆ ಮುಂಡಗೋಡ ಪೊಲೀಸ್‌ ಠಾಣೆಯ ಕಾನ್ಸ್‌ಟೇಬಲ್ ಗಿರೀಶ ಎಸ್.ಎಮ್ ಎಂಬಾತನ ಮೇಲೆ ಭಾನುವಾರ ರಾತ್ರಿ ಪ್ರಕರಣ ದಾಖಲಾಗಿದೆ.

Fraud: ಯುವತಿಯಿಂದ 18 ಲಕ್ಷ ರೂ. ಪಡೆದು ವಂಚಿಸಿದ ಕಾನ್ಸ್‌ಟೇಬಲ್‌

ಕಾನ್ಸ್ಟೇಬಲ್ ಗಿರೀಶ್‌ ಎಂಬಾತನು ಮನೆ ಕಟ್ಟಲು ಹಣದ ಅವಶ್ಯಕತೆಯಿದೆ ಎಂದು ಹಾಸನ ಮೂಲದ ಯುವತಿಯ ನಂಬಿಸಿ 2018ರ ಏಪ್ರಿಲ್‌ 27 ರಿಂದ 2023ರ ಆಗಸ್ಟ್‌ 23ರವರೆಗೆ ಆನ್ ಲೈನ್ ಮೂಲಕ ಹಾಗೂ ಏ.28 2021ರಂದು ಮುಂಡಗೋಡದ ಕೆಎಚ್.ಬಿ ಕಾಲನಿಯ ಮನೆಯಲ್ಲಿ 2.50ಲಕ್ಷ ರೂಪಾಯಿ ಸೇರಿ ಒಟ್ಟು 18ಲಕ್ಷ ರೂಪಾಯಿ ತೆಗೆದುಕೊಂಡು ಯುವತಿಗೆ ಚೆಕ್ ಗಳನ್ನು ನೀಡಿ ತೆಗೆದುಕೊಂಡ ಹಣ ಮರಳಿ ನೀಡದೇ ನಂಬಿಸಿ ಮೋಸ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದೆ.

ಘಟನೆ ವಿವರ: ಒಂದೇ ಜಿಲ್ಲೆಯವರಾದ ಇವರು ಯುವತಿಯ ಮದುವೆಯಾಗುವುದಾಗಿ ನಂಬಿಸಿ ಮನೆ ಕಟ್ಟುವುದು, ಗದ್ದೆ ಕೆಲಸ ಹೀಗೆ ಯುವತಿಗೆ ಮರುಳು ಮಾಡಿ ಹಣ ಪಡೆದು ಆನ್ ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂಡಿದ್ದ ಎನ್ನಲಾಗಿದೆ. ಈ ಹಿಂದೆ ಈ ಬಗ್ಗೆ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಯುವತಿಗೆ ಹಣ ನೀಡುವುದಾಗಿ ಒಪ್ಪಿಕೊಂಡು ಹಣ ನೀಡಲು ಸಮಯ ಪಡೆದು ಚೆಕ್ ನೀಡಿದ್ದ ಆದರೆ ಈವರೆಗೂ ಹಣ ನೀಡದಿರುವುದರಿಂದ ಭಾನುವಾರ ರಾತ್ರಿ ಯುವತಿ ಪ್ರಕರಣ ದಾಖಲಿಸಿದ್ದಾಳೆ. ಇದಲ್ಲದೆ ತಾಲೂಕಿನ ಇತರ ಕಡೆ ಮತ್ತು ಕೆಲ ಸಿಬ್ಬಂದಿಗಳ ಬಳಿ ಹಣ ಪಡೆದು ವಾಪಸ್‌ ನೀಡದಿರುವುದು ಬೆಳಕಿಗೆ ಬಂದಿದೆ. ಇನ್ನು ಕೆಲವರು ಕಾನ್ಸ್‌ಟೇಬಲ್ ವಿರುದ್ಧ ಪ್ರಕರಣ ದಾಖಲಿಸುವ ಸಾಧ್ಯತೆ ಇದೆ


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ