Breaking News
Home / ರಾಜಕೀಯ / ಕಾಂಗ್ರೆಸ್ ಮುಖಂಡರನ್ನು ಮತ್ತು ಕಾರ್ಯಕರ್ತರನ್ನ ಭೇಟಿ ಮಾಡಿ ಅಭಿನಂದನೆ ಸ್ವೀಕರಿಸಿದ ;ಕು. ಪ್ರಿಯಾಂಕಾ ಜಾರಕಿಹೊಳಿ

ಕಾಂಗ್ರೆಸ್ ಮುಖಂಡರನ್ನು ಮತ್ತು ಕಾರ್ಯಕರ್ತರನ್ನ ಭೇಟಿ ಮಾಡಿ ಅಭಿನಂದನೆ ಸ್ವೀಕರಿಸಿದ ;ಕು. ಪ್ರಿಯಾಂಕಾ ಜಾರಕಿಹೊಳಿ

Spread the love

ಥಣಿ : ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಅಥಣಿ ಮತಕ್ಷೇತ್ರಕ್ಕೆ ಪ್ರಥಮ ಬಾರಿಗೆ ಭೇಟಿ ನೀಡಿದ ನೂತನ ಸಂಸದೆ ಕು. ಪ್ರಿಯಾಂಕಾ ಜಾರಕಿಹೊಳಿ ಕಾಂಗ್ರೆಸ್ ಮುಖಂಡರನ್ನು ಮತ್ತು ಕಾರ್ಯಕರ್ತರನ್ನ ಭೇಟಿ ಮಾಡಿ ಅಭಿನಂದನೆ ಸ್ವೀಕರಿಸಿದರು.

ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ ಪುತ್ತಳಿ ಸೇರಿದಂತೆ ಅಥಣಿ ಪಟ್ಟಣದ ಎಲ್ಲ ಮಹಾತ್ಮರ ಪುತ್ತಳಿಗೆ ಮಾಲಾರ್ಪಣೆ ಸಲ್ಲಿಸಿ ಗೌರವ ಸಮರ್ಪಿಸಿದರು. ನಂತರ ಅಥಣಿಯ ಆರಾಧ್ಯ ದೈವ ಶ್ರೀ ಸಿದ್ದೇಶ್ವರ ದೇವಸ್ಥಾನ, ಸುಕ್ಷೇತ್ರ ಗಚ್ಚಿನಮಠ, ಮೋಟಗಿ ಮಠ ಮತ್ತು ಶೆಟ್ಟರ ಮಠಗಳಿಗೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡರು.

 

ಸವದಿ ಕ್ಷೇತ್ರದಲ್ಲಿ ಸಾಹುಕಾರ್ ಪುತ್ರಿ ದರ್ಬಾರ್..! ಅಭಿವೃದ್ಧಿ ಮೂಲಮಂತ್ರ ಎಂದ ಪ್ರಿಯಾಂಕಾ

 

ನಂತರ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಅಥಣಿ ಮತ ಕ್ಷೇತ್ರದ ವಿವಿಧ ಗ್ರಾಮಗಳಿಂದ ಆಗಮಿಸಿದ ಕಾಂಗ್ರೆಸ್ ಮುಖಂಡರ ಹಾಗೂ ಕಾರ್ಯಕರ್ತರ ಅಭಿನಂದನಾ ಸನ್ಮಾನ ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಅವರು.

ಅತ್ಯಂತ ಕಿರಿಯ ವಯಸ್ಸಿನಲ್ಲಿ ಜನಸೇವೆ ಮಾಡುವ ಅವಕಾಶ ನನಗೆ ದೊರಕಿದೆ. ರಾಜಕೀಯ ಅನುಭವ ಇರುವ ಸಂಸದರೊಂದಿಗೆ ಕಾರ್ಯನಿರ್ವಹಿಸುವ ಅವಕಾಶ ದೊರಕಿರುವುದು ನನಗೆ ಹೆಮ್ಮೆ ತಂದಿದೆ. ಇದಕ್ಕೆ ಅವಕಾಶ ಕಲ್ಪಿಸಿದ ಎಐಸಿಸಿ ಅಧ್ಯಕ್ಷರು ಮತ್ತು ಪಕ್ಷದ ಹಿರಿಯರು ಆದ ಮಲ್ಲಿಕಾರ್ಜುನ ಖರ್ಗೆ‌.

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ನನ್ನ ಪೂಜ್ಯ ತಂದೆಯವರಾದ ಸತೀಶ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಹಗಲಿರುಳು ಶ್ರಮಿಸಿ ಲೋಕಸಭಾ ಚುನಾವಣೆಯಲ್ಲಿ ನನಗೆ ಪ್ರಚಂಡ ಬಹುಮತ ಬರುವಂತೆ ಮಾಡಿದ.


Spread the love

About Laxminews 24x7

Check Also

ದೊಡ್ಮನೆ ಕುಟುಂಬದ ಕುಡಿ ಧನ್ಯಾ ರಾಮ್​ಕುಮಾರ್ ಹೊಸ ಸಿನಿಮಾ ಅನೌನ್ಸ್; ಪೃಥ್ವಿ ಅಂಬಾರ್​ಗೆ ಜೋಡಿ

Spread the love ನಿನ್ನ ಸನಿಹಕೆ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಧನ್ಯಾ ರಾಮ್​ಕುಮಾರ್ ಕಾಲಿಟ್ಟರು. ಆ ಬಳಿಕ ‘ಹೈಡ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ