Breaking News

ಸಿಲಿಂಡರ್ ಸ್ಫೋಟಗೊಂಡು ಹಾರಿ ಹೋದ ಮನೆಯ ಮೇಲ್ಛಾವಣಿ. ತಪ್ಪಿದ ಅನಾಹುತ

Spread the love

ಮುಧೋಳ: ಸಿಲಿಂಡರ್ ಸ್ಫೋಟಗೊಂಡು ಮನೆಗೆ ಹಾನಿಯಾಗಿರುವ ಘಟನೆ ಸಮೀಪದ ಶಿರೋಳ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.
ಸಿದ್ದಪ್ಪ ಮುಂಡಗನೂರ ಅವರ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ‌ ಸಿಲಿಂಡರ್ ಸ್ಫೋಟಗೊಂಡಿದ್ದು ಸ್ಫೋಟದ ಭಿಕರತೆಗೆ ಮನೆಯ ಮೇಲ್ಛಾವಣಿ ಹಾರಿಹೋಗಿದೆ.

Mudhol: ಸಿಲಿಂಡರ್ ಸ್ಫೋಟಗೊಂಡು ಹಾರಿ ಹೋದ ಮನೆಯ ಮೇಲ್ಛಾವಣಿ. ತಪ್ಪಿದ ಅನಾಹುತ

ತಪ್ಪಿದ ಅನಾಹುತ: ಮಧ್ಯಾಹ್ನದ ಸಮಯದಲ್ಲಿ‌ ಮನೆಯ ಮಂದಿಯೆಲ್ಲ ಬೀಗ ಹಾಕಿಕೊಂಡು ಕೂಲಿ‌ ಕೆಲಸಕ್ಕೆ ತೆರಳಿದ್ದರು, ಈ ವೇಳೆ ಸಿಲಿಂಡರ್ ಸ್ಫೋಟಗೊಂಡಿದ್ದು ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.

ಮನೆಯ ಕೆಲ ಸದಸ್ಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹೆಚ್ಚಿನ ಅನಾಹುತ ತಪ್ಪಿಸಿದರು.


Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ