Breaking News

ಮೆಗ್ಗಾನ್ ಭೋಧನಾ ಆಸ್ಪತ್ರೆಯ ಕೋವಿಡ್-19 ವಾರ್ಡ್ ನಲ್ಲಿ ಹೊಗೆ

Spread the love

ಶಿವಮೊಗ್ಗ: ನಗರದ ಮೆಗ್ಗಾನ್ ಭೋಧನಾ ಆಸ್ಪತ್ರೆಯ ಕೋವಿಡ್-19 ವಾರ್ಡ್ ನಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ ಕೆಲ ಕಾಲ ಆಸ್ಪತ್ರೆ ಆವರಣದಲ್ಲಿ ಆತಂಕ ಉಂಟಾಗಿತ್ತು.

ಕೋವಿಡ್ ವಾರ್ಡ್ ಗೆ ಆಕ್ಸಿಜನ್ ಪೂರೈಕೆ ಮಾಡುವ ಹೆಚ್‍ಎಫ್‍ಎನ್‍ಸಿ ಯಂತ್ರ 24 ಗಂಟೆಗಳ ಕಾಲ ಸತತವಾಗಿ ಕಾರ್ಯ ನಿರ್ವಹಿಸುತ್ತದೆ. ಹೀಗಾಗಿ ಯಂತ್ರದಲ್ಲಿ ಹೆಚ್ಚು ಶಾಖ ಉಂಟಾದ ಪರಿಣಾಮ ಹೊಗೆ ಕಾಣಿಸಿಕೊಂಡಿದೆ ಎಂದು ಅಂದಾಜಿಸಲಾಗಿದೆ. ಆದರೆ ಈ ವೇಳೆ ವಾರ್ಡ್ ನಲ್ಲಿ ಯಾವುದೇ ರೋಗಿಗಳು ಇಲ್ಲದಿದ್ದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ.ಆತಂಕಪಡುವ ಅಗತ್ಯವಿಲ್ಲ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಇನ್ನು ಆಸ್ಪತ್ರೆಯಲ್ಲಿ ಹೊಗೆ ಕಾಣಿಸಿಕೊಂಡ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ವಾರ್ಡ್ ನಲ್ಲಿ ಆವರಿಸಿಕೊಂಡಿದ್ದ ಹೊಗೆಯನ್ನು ಮುಕ್ತಗೊಳಿಸಿದರು. ಇದೀಗ ಪರಿಣಿತರ ತಂಡ ಈ ಕುರಿತು ಪರಿಶೀಲನೆ ನಡೆಸುತ್ತಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ