Breaking News
Home / Uncategorized / ಪಂಚಾಯತ್‌ಗಳ ಬಲವರ್ಧನೆಗೆ ರಾಜ್ಯ ಸರಕಾರ ಚಿತ್ತ ಹರಿಸಲಿ

ಪಂಚಾಯತ್‌ಗಳ ಬಲವರ್ಧನೆಗೆ ರಾಜ್ಯ ಸರಕಾರ ಚಿತ್ತ ಹರಿಸಲಿ

Spread the love

ರಾಜ್ಯದಲ್ಲಿ ಜುಲೈ ಒಂದರಿಂದ ಅನ್ವಯವಾಗುವಂತೆ ಜನನ ಮತ್ತು ಮರಣ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಹಾಗೂ ಗ್ರಾಮ ಆಡಳಿತಾಧಿಕಾರಿಗಳಿಗೂ ನೀಡಲಾಗಿದೆ. ರಾಜ್ಯ ಸರಕಾರದ ಈ ನಿರ್ಧಾರದಿಂದ ಸಾರ್ವಜನಿಕರು ಜನನ ಮತ್ತು ಮರಣ ಪತ್ರಗಳಿಗಾಗಿ ಕಚೇರಿಗಳು ಮತ್ತು ಅಧಿಕಾರಿಗಳ ಬಳಿಗೆ ಅಲೆದಾಟ ನಡೆಸಬೇಕಾದ ಅನಿವಾರ್ಯತೆ ತಪ್ಪಲಿದೆಯಲ್ಲದೆ ಇನ್ನಷ್ಟು ತ್ವರಿತಗತಿಯಲ್ಲಿ ಈ ಪ್ರಮಾಣಪತ್ರಗಳು ಜನರ ಕೈಸೇರಲಿವೆ.

ಸದ್ಯದ ನಿಯಮಾವಳಿಯಂತೆ ಗ್ರಾಮ ಲೆಕ್ಕಿಗರು, ಕಂದಾಯ ನಿರೀಕ್ಷಕರು ಮತ್ತು ಆರೋಗ್ಯಾಧಿಕಾರಿಗಳಿಗೆ ಮಾತ್ರವೇ ಜನನ ಮತ್ತು ಮರಣ ಪ್ರಮಾಣ ಪತ್ರ ನೀಡುವ ಅಧಿಕಾರವಿತ್ತು. ಇದರಿಂದ ಈ ಪ್ರಮಾಣ ಪತ್ರಗಳಿಗಾಗಿ ಬರುವ ಅರ್ಜಿಗಳ ವಿಲೇವಾರಿ ವಿಳಂಬವಾಗುತ್ತಿತ್ತು. ಶಿಕ್ಷಣ, ಉದ್ಯೋಗ ಮತ್ತು ಸರಕಾರಿ ಕೆಲಸಕಾರ್ಯಗಳಿಗೆ ಈ ಪ್ರಮಾಣ ಪತ್ರಗಳು ಅತ್ಯಗತ್ಯವಾಗಿದೆ. ನಿರೀಕ್ಷಿತ ಸಂಖ್ಯೆಯಲ್ಲಿ ಗ್ರಾಮ ಲೆಕ್ಕಿಗರು ಮತ್ತು ಕಂದಾಯ ನಿರೀಕ್ಷಕರು ಇಲ್ಲದಿರುವುದರಿಂದಾಗಿ ಈ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬವಾಗುತ್ತಿದೆ. ಇದರಿಂದಾಗಿ ಸಾರ್ವಜನಿಕರು ಈ ಪ್ರಮಾಣ ಪತ್ರಗಳನ್ನು ಪಡೆಯಲು ಗ್ರಾಮ ಪಂಚಾಯತ್‌ ಕಚೇರಿ, ಆರೋಗ್ಯಾಧಿಕಾರಿಗಳ ಕಚೇರಿಗೆ ಅಲೆದಾಡಲೇ ಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ.


Spread the love

About Laxminews 24x7

Check Also

ಮಂಚೂರಿ, ಬಾಂಬೇ ಮಿಠಾಯಿ ಬಳಿಕ ಕಬಾಬ್‌ಗೂ ನಿಷೇಧ

Spread the love ಬೆಂಗಳೂರು: ರಾಜ್ಯಾ ದ್ಯಂತ ವೆಜ್‌ ಕಬಾಬ್‌, ಕೋಳಿ ಹಾಗೂ ಮೀನಿನ ಕಬಾಬ್‌ ತಯಾರಿಗೆ ಕೃತಕ ಬಣ್ಣ ಉಪಯೋಗಿಸುವುದನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ