Breaking News

ಪಂಚಾಯತ್‌ಗಳ ಬಲವರ್ಧನೆಗೆ ರಾಜ್ಯ ಸರಕಾರ ಚಿತ್ತ ಹರಿಸಲಿ

Spread the love

ರಾಜ್ಯದಲ್ಲಿ ಜುಲೈ ಒಂದರಿಂದ ಅನ್ವಯವಾಗುವಂತೆ ಜನನ ಮತ್ತು ಮರಣ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಹಾಗೂ ಗ್ರಾಮ ಆಡಳಿತಾಧಿಕಾರಿಗಳಿಗೂ ನೀಡಲಾಗಿದೆ. ರಾಜ್ಯ ಸರಕಾರದ ಈ ನಿರ್ಧಾರದಿಂದ ಸಾರ್ವಜನಿಕರು ಜನನ ಮತ್ತು ಮರಣ ಪತ್ರಗಳಿಗಾಗಿ ಕಚೇರಿಗಳು ಮತ್ತು ಅಧಿಕಾರಿಗಳ ಬಳಿಗೆ ಅಲೆದಾಟ ನಡೆಸಬೇಕಾದ ಅನಿವಾರ್ಯತೆ ತಪ್ಪಲಿದೆಯಲ್ಲದೆ ಇನ್ನಷ್ಟು ತ್ವರಿತಗತಿಯಲ್ಲಿ ಈ ಪ್ರಮಾಣಪತ್ರಗಳು ಜನರ ಕೈಸೇರಲಿವೆ.

ಸದ್ಯದ ನಿಯಮಾವಳಿಯಂತೆ ಗ್ರಾಮ ಲೆಕ್ಕಿಗರು, ಕಂದಾಯ ನಿರೀಕ್ಷಕರು ಮತ್ತು ಆರೋಗ್ಯಾಧಿಕಾರಿಗಳಿಗೆ ಮಾತ್ರವೇ ಜನನ ಮತ್ತು ಮರಣ ಪ್ರಮಾಣ ಪತ್ರ ನೀಡುವ ಅಧಿಕಾರವಿತ್ತು. ಇದರಿಂದ ಈ ಪ್ರಮಾಣ ಪತ್ರಗಳಿಗಾಗಿ ಬರುವ ಅರ್ಜಿಗಳ ವಿಲೇವಾರಿ ವಿಳಂಬವಾಗುತ್ತಿತ್ತು. ಶಿಕ್ಷಣ, ಉದ್ಯೋಗ ಮತ್ತು ಸರಕಾರಿ ಕೆಲಸಕಾರ್ಯಗಳಿಗೆ ಈ ಪ್ರಮಾಣ ಪತ್ರಗಳು ಅತ್ಯಗತ್ಯವಾಗಿದೆ. ನಿರೀಕ್ಷಿತ ಸಂಖ್ಯೆಯಲ್ಲಿ ಗ್ರಾಮ ಲೆಕ್ಕಿಗರು ಮತ್ತು ಕಂದಾಯ ನಿರೀಕ್ಷಕರು ಇಲ್ಲದಿರುವುದರಿಂದಾಗಿ ಈ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬವಾಗುತ್ತಿದೆ. ಇದರಿಂದಾಗಿ ಸಾರ್ವಜನಿಕರು ಈ ಪ್ರಮಾಣ ಪತ್ರಗಳನ್ನು ಪಡೆಯಲು ಗ್ರಾಮ ಪಂಚಾಯತ್‌ ಕಚೇರಿ, ಆರೋಗ್ಯಾಧಿಕಾರಿಗಳ ಕಚೇರಿಗೆ ಅಲೆದಾಡಲೇ ಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ