Breaking News

ರೇಣುಕಸ್ವಾಮಿ ಪತ್ನಿಗೆ ಸರ್ಕಾರಿ ನೌಕರಿ ನೀಡಲು ಒತ್ತಾಯ

Spread the love

ಳಕಲ್: ಕೊಲೆಯಾಗಿರುವ ಚಿತ್ರದುರ್ಗದ ರೇಣುಕಸ್ವಾಮಿ ಅವರ ಪತ್ನಿಗೆ ಸರ್ಕಾರಿ ನೌಕರಿ ಕೊಡಬೇಕು. ಕೊಲೆ ಪ್ರಕರಣದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ, ಇಲ್ಲಿಯ ಕಂಠಿ ವೃತ್ತದಲ್ಲಿ ಮಂಗಳವಾರ ವೀರಮಾಹೇಶ್ವರ ಜಂಗಮ ಸಮಾಜದವರು ತಹಶೀಲ್ದಾರ್‌ ಸತೀಶ ಕೂಡಲಗಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಇಳಕಲ್ | ರೇಣುಕಸ್ವಾಮಿ ಪತ್ನಿಗೆ ಸರ್ಕಾರಿ ನೌಕರಿ ನೀಡಲು ಒತ್ತಾಯ

ನಗರದ ಪ್ರವಾಸಿ ಮಂದಿರ ಹತ್ತಿರದ ರೇಣುಕಾಚಾರ್ಯ ವೃತ್ತದಲ್ಲಿ ರೇಣುಕಾಚಾರ್ಯರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಬಸ್ ನಿಲ್ದಾಣ ಮಾರ್ಗವಾಗಿ ಕಂಠಿ ವೃತ್ತ ತಲುಪಿದರು. ಸಂದೇಶಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್‌ ಕಮಿಷನರ್ ಬಿ.ದಯಾನಂದ, ಡಿಸಿಪಿ ಗೀರಿಶ್, ಎಸಿಪಿ ಚಂದನ ಎಸ್, ಅಭಿಯೋಜಕರಾದ ಪ್ರಸನ್ನಕುಮಾರ ಅವರ ಭಾವಚಿತ್ರಗಳಿಗೆ ಪುಷ್ಪವೃಷ್ಟಿ ಮಾಡಿದರು.

ಇಳಕಲ್‌ ತಾಲ್ಲೂಕು ಜಂಗಮ ಸಮಾಜದ ಪ್ರಧಾನ ಕಾರ್ಯದರ್ಶಿ ಸಂಗಮೇಶ್ ಜಾವುರಮಠ ಮಾತನಾಡಿ, ‘ಕೊಲೆಯಾಗಿರುವ ರೇಣುಕಸ್ವಾಮಿಯ ಪತ್ನಿಗೆ ಸರ್ಕಾರಿ ನೌಕರಿ ನೀಡಬೇಕು’ ಎಂದು ಎಂದು ಒತ್ತಾಯಿಸಿದರು.

ನಿವೃತ್ತ ಪ್ರಾಧ್ಯಾಪಕ ವಿಶ್ವನಾಥ ವಂಶಾಕೃತಮಠ ಮಾತನಾಡಿ, ʼರಾಜ್ಯದಲ್ಲಿ ಸಮಾಜದ ಬಾಂಧವರ ಸರಣಿ ಕೊಲೆಗಳಾಗಿವೆ. ಇದನ್ನು ಖಂಡಿಸುತ್ತೇವೆ. ಸರ್ಕಾರ ನ್ಯಾಯ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕುʼ ಎಂದರು. ಸಮಾಜ ಸೇವಕಿ ಜಯಶ್ರೀ ಸಾಲಿಮಠ ಮಾತನಾಡಿ, ʼಸಂದೇಶಸ್ವಾಮಿಯನ್ನು ಕೊಲೆ ಮಾಡಿರುವ ದರ್ಶನ್‌ನನ್ನು ಎನ್‌ಕೌಂಟರ್‌ ಮಾಡಬೇಕು. ಇಲ್ಲವೇ ಮಹಿಳೆಯರ ಕೈಯಲ್ಲಿ ಕೊಡಿ, ನಾವು ಪಾಠ ಕಲಿಸುತ್ತೇವೆ. ನೇಹಾ ಹಿರೇಮಠ, ಆಕಾಶ ಮಠಪತಿ, ರೇಣುಕಾ ಸ್ವಾಮಿಯ ಬರ್ಬರ ಹತ್ಯೆಯ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಲೇಬೇಕುʼ ಎಂದು ಒತ್ತಾಯಿಸಿದರು.


Spread the love

About Laxminews 24x7

Check Also

ಕತ್ತಿ ವಿರುದ್ಧ ಕಾನೂನು ರೀತಿಯಲ್ಲಿ ಹೋರಾಟ

Spread the loveಕತ್ತಿ ವಿರುದ್ಧ ಕಾನೂನು ರೀತಿಯಲ್ಲಿ ಹೋರಾಟ : ಹುಕ್ಕೇರಿ ವಿದ್ಯುತ್ ಸಂಘದ ಚುನಾವಣೆ ಹಾಗೂ ಡಿಸಿಸಿ ಬ್ಯಾಂಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ