Breaking News
Home / ರಾಜಕೀಯ / ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ 13ಕ್ಕೂ ಹೆಚ್ಚು ಜನ ಸಾವು

ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ 13ಕ್ಕೂ ಹೆಚ್ಚು ಜನ ಸಾವು

Spread the love

ಹಾವೇರಿ, ಜೂನ್​ 28: ಬ್ಯಾಡಗಿ (Byadagi) ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 13 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ (TT Vehicle) ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ.

ಪರಶುರಾಮ್ ​​(45), ಭಾಗ್ಯ (40), ನಾಗೇಶ (50), ವಿಶಾಲಾಕ್ಷಿ (40), ಅರ್ಪಿತಾ (18), ಸುಭದ್ರಾ ಬಾಯಿ (65), ಪುಣ್ಯ (50), ಮಂಜುಳಾಬಾಯಿ, ಚಾಲಕ ಆದರ್ಶ್ (23), ಮಾನಸ (24), ರೂಪಾ (40), ಮಂಜುಳಾ (50) ಮೃತರು ಮೃತಪಟ್ಟವರು. ಶಿವಮೂಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಎಮ್ಮೆಹಟ್ಟಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.

ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ ಎನ್ನಲಾಗಿದೆ.

ಮೃತ ನಾಗೇಶ್​ ಎಮ್ಮೆಹಟ್ಟಿ ಗ್ರಾಮದಲ್ಲಿ ಕೃಷಿಕರಾಗಿದ್ದಾರೆ. ನಾಗೇಶ್​ ಪತ್ನಿ ವಿಶಾಲಾಕ್ಷಿ ಆಶಾ ಕಾರ್ಯಕರ್ತೆ ಯಾಗಿದ್ದರು. ವಿಶಾಲಾಕ್ಷಿ ಕೂಡ ಮೃತಪಟ್ಟಿದ್ದಾರೆ. ನಾಗೇಶ್​ ಮತ್ತು ವಿಶಾಲಕ್ಷಿ ದಂಪತಿ ಪುತ್ರ ಆದರ್ಶ್ ಹೊಸ ಟಿಟಿ ವಾಹನ ಖರೀದಿಸಿದ್ದರು.

ಹೊಸ ಟಿಟಿ ವಾಹನಕ್ಕೆ ಪೂಜೆ ಮಾಡಿಸಲು ಹೋಗಿದ್ದ ಕುಟುಂಬದವರು ಸೋಮವಾರ ಮಧ್ಯಾಹ್ನ 12 ಗಂಟೆ ಕಲಬುರಗಿ ಜಿಲ್ಲೆಯ ಚಿಂಚೋಳಿಯ ಮಾಯಮ್ಮ ದೇವಸ್ಥಾನಕ್ಕೆ ಹೋಗಿದ್ದಾರೆ. ಅಲ್ಲಿ ವಾಹನ ಪೂಜೆ ಮಾಡಿಸಿ, ಮಹಾರಾಷ್ಟ್ರ ತುಳಜಾ ಭವಾನಿ ದೇವಿಯ ದರ್ಶನ ಪಡೆದಿದ್ದಾರೆ.

ನಂತರ ಬೆಳಗಾವಿ ರೇಣುಕಾ ಯಲ್ಲಮ್ಮ ದರ್ಶನ ಪಡೆದು ಮರಳಿ ಊರಿಗೆ ಹೋಗುವಾ ಅಪಘಾತ ಸಂಭವಿಸಿದೆ.


Spread the love

About Laxminews 24x7

Check Also

ಪ್ರವಾಹ ಎದುರಿಸಲು ಕ್ರಮ ಕೈಗೊಳ್ಳಿ: ತಹಶೀಲ್ದಾರ್‌ ಮಂಜುಳಾ ನಾಯಿಕ

Spread the love ಸಂಕೇಶ್ವರ: ಮಹಾರಾಷ್ಟ್ರದ ಅಂಬೋಲಿ ಘಟ್ಟ ಪ್ರದೇಶದಲ್ಲಿ ರಭಸದಿಂದ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಸಂಕೇಶ್ವರ ಪಟ್ಟಣದ ಹರಿಯುವ ಹಿರಣ್ಯಕೇಶಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ