ಬೆಂಗಳೂರು(ಜೂ.28): ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ಕಿರುಕುಳ (ಪೋಕ್ಸೋ) ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಮೂವರು ಬೆಂಬಲಿಗರ ವಿರುದ್ಧ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳು ಗುರುವಾರ ಆರೋಪ ಪಟ್ಟಿ ಸಲ್ಲಿಸಿದ್ದಾರೆ.
ಯಡಿಯೂರಪ್ಪ ವಿರುದ್ಧ ಬಾಲಕಿ ಮೇಲೆ ಲೈಂಗಿಕ ಕಿರುಕುಳ, ಕೃತ್ಯ ಬೆಳಕಿಗೆ ಬಾರದಂತೆ ಸಾಕ್ಷ್ಯ ನಾಶ ಹಾಗೂ ಸಂತ್ರಸ್ತೆಗೆ ಹಣದ ಆಮಿಷವೊಡ್ಡಿದ್ದ ಆರೋಪಗಳು ಸಾಬೀತಾಗಿವೆ ಎಂದು ಸಿಐಡಿ ಉಲ್ಲೇಖಿಸಿದೆ.
ಅದೇ ರೀತಿ ಯಡಿಯೂರಪ್ಪ ಅವರ ಬೆಂಬಲಿಗರಾದವೈ.ಎಂ.ಅರುಣ್, ರಾಜ್ಯ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ಎಂ.ರುದ್ರೇಶ್ ಹಾಗೂ ಬೆಂಗಳೂರು ನಗರ ಜಿಪಂ ಮಾಜಿ ಅಧ್ಯಕ್ಷ ಜಿ.ಮರಿಸ್ವಾಮಿ ವಿರುದ್ಧ ಕೃತ್ಯ ಬೆಳಕಿಗೆ ಬಾರದಂತೆ ಸಾಕ್ಷ್ಯ ನಾಶ ಮಾಡಿರುವುದು ತನಿಖೆಯಲ್ಲಿ ರುಜುವಾತಾಗಿದೆ ಎಂದು ಆರೋಪಪಟ್ಟಿಯಲ್ಲಿ ಸಿಐಡಿ ಅಧಿಕಾರಿಗಳು ಹೇಳಿದಾರೆ.