Breaking News
Home / ರಾಜಕೀಯ / ಶ್ರೀಗಳು ಹೇಳಿದ ಮಾತ್ರಕ್ಕೆ ಮುಖ್ಯಮಂತ್ರಿ ಬದಲಾವಣೆ ಆಗಲ್ಲ, ಶಿವಶಂಕರಪ್ಪ

ಶ್ರೀಗಳು ಹೇಳಿದ ಮಾತ್ರಕ್ಕೆ ಮುಖ್ಯಮಂತ್ರಿ ಬದಲಾವಣೆ ಆಗಲ್ಲ, ಶಿವಶಂಕರಪ್ಪ

Spread the love

ದಾವಣಗೆರೆ: ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಶ್ರೀಗಳು ಸಿದ್ದರಾಮಯ್ಯ ಅವರು ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಬೇಕು ಅಂತ ಹೇಳಿ ರಾಜ್ಯ ರಾಜಕೀಯ ವಲಯದಲ್ಲಿ ಕೋಲಾಹಲ ಸೃಷ್ಟಿಸಿದ್ದಾರೆ.

ದಾವಣಗೆರೆಯಲ್ಲಿ ಇಂದು ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರೀಗಳು ಆಡಿರುವ ಮಾತಿನ ಬಗ್ಗೆ ಹೇಳಿದಾಗ, ಅವರು ಸುಮಾರು 15-20 ಸಲ ಹೈಕಮಾಂಡ್ ಪದ ಬಳಸಿದರು. ಶ್ರೀಗಳು ಹೇಳಿದ್ದಾರೆಂಬ ಕಾರಣಕ್ಕೆ ಮುಖ್ಯಮಂತ್ರಿಯವರನ್ನು ಬದಲಾಯಿಸಲಾಗುತ್ತದೆಯೇ? ಹೈಕಮಾಂಡ್ ಗೆ ಯಾವಾಗ ಏನು ಮಾಡಬೇಕು ಅಂತ ಚೆನ್ನಾಗಿ ಗೊತ್ತಿದೆ ಎಂದು ಹಿರಿಯ ನಾಯಕ ಹೇಳಿದರು.

ಸಿದ್ದರಾಮಯ್ಯ ಸರಿಯಾಗಿ ಆಡಳಿತ ನಡೆಸುತ್ತಿಲ್ಲವೆಂಬ ಕಾರಣಕ್ಕೆ ಅವರನ್ನು ಬದಲಾಯಿಸಬೇಕೆಂಬ ಮಾತು ಕೇಳಿಬರುತ್ತಿದೆಯೇ ಅಂತ ಕೇಳಿದ್ದಕ್ಕೆ ರೇಗಿದ ಶಿವಶಂಕರಪ್ಪನವರು, ಯಾರು ಹೇಳಿದ್ದು ಅವರ ಆಡಳಿತ ಚೆನ್ನಾಗಿ ನಡೆಸುತ್ತಿಲ್ಲ ಅಂತ? ಬಹಳ ಚೆನ್ನಾಗಿ ಅವರು ಸರ್ಕಾರ ನಡೆಸುತ್ತಿದ್ದಾರೆ ಎಂದು ಹೇಳಿದರು.


Spread the love

About Laxminews 24x7

Check Also

ಪ್ರವಾಹ ಎದುರಿಸಲು ಕ್ರಮ ಕೈಗೊಳ್ಳಿ: ತಹಶೀಲ್ದಾರ್‌ ಮಂಜುಳಾ ನಾಯಿಕ

Spread the love ಸಂಕೇಶ್ವರ: ಮಹಾರಾಷ್ಟ್ರದ ಅಂಬೋಲಿ ಘಟ್ಟ ಪ್ರದೇಶದಲ್ಲಿ ರಭಸದಿಂದ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಸಂಕೇಶ್ವರ ಪಟ್ಟಣದ ಹರಿಯುವ ಹಿರಣ್ಯಕೇಶಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ