Breaking News

ಸಿಎಂ ಬದಲಾವಣೆ ಮಾಡುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು;: ಶಿವಾಚಾರ್ಯ ಸ್ವಾಮೀಜಿ

Spread the love

ಚಿಕ್ಕೋಡಿ, ಜೂನ್ 28: ಡಿಸಿಎಂ ಡಿಕೆ ಶಿವಕುಮಾರ್​​ಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡುವಂತೆ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ ಬೆನ್ನಲ್ಲೇ ಇದೀಗ ವಿವಿಧ ಸಮುದಾಯಗಳ ಸ್ವಾಮೀಜಿಗಳು ಆ ಬಗ್ಗೆ ಹೇಳಿಕೆಗಳನ್ನು ನೀಡಲು ಆರಂಭಿಸಿದ್ದಾರೆ. ಇದೀಗ, ಪಂಚ ಪೀಠದಿಂದ ಲಿಂಗಾಯತ ಮುಖ್ಯಮಂತ್ರಿಗೆ ಬೇಡಿಕೆ ವ್ಯಕ್ತವಾಗಿದೆ.

ಮುಖ್ಯಮಂತ್ರಿ ಬದಲಾವಣೆ ಮಾಡುವುದೇ ಆದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು ಎಂದು ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತರಾದ್ಯ ಶಿವಾಚಾರ್ಯ ಸ್ವಾಮೀಜಿ ಆಗ್ರಹಿಸಿದ್ದಾರೆ.

 

ಸಿಎಂ ಬದಲಾವಣೆ ಮಾಡುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು; ಪಂಡಿತರಾದ್ಯ ಶಿವಾಚಾರ್ಯ ಸ್ವಾಮೀಜಿ ಆಗ್ರಹ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ಮಾತನಾಡಿದ ಶ್ರೀಶೈಲ ಜಗದ್ಗುರುಗಳು, ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆ ಹಾಗೂ ಡಿಸಿಎಂ ಸ್ಥಾನಗಳನ್ನ ಹೆಚ್ಚುವರಿ ಮಾಡಿದರೆ ಲಿಂಗಾಯತರಿಗೆ ಸ್ಥಾನ ನೀಡಬೇಕು. ಚುನಾವಣೆ ಸಂದರ್ಭದಲ್ಲಿ ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕಿದ್ದಾರೆ.

ಎಂಬಿ ಪಾಟೀಲ್, ಈಶ್ವರ ಖಂಡ್ರೆ, ಎಸ್ಎಸ್ ಮಲ್ಲಿಕಾರ್ಜುನ, ಶಾಮನೂರು ಶಿವಶಂಕರಪ್ಪ ಇಂತಹವರಿಗೆ ಅವಕಾಶ ನೀಡಬೇಕು. ಕಾಶಿ, ಉಜ್ಜಯಿನಿ ಜಗದ್ಗುರುಗಳ ಜೊತೆಗೂ ಈ ವಿಚಾರದಲ್ಲಿ ಚರ್ಚೆ ಮಾಡಲಾಗಿದೆ ಎಂದರು.

ಮುಂದುವರಿದು, ಒಂದು ವೇಳೆ ಆರಂಭದಲ್ಲಿ ಮುಖ್ಯಮಂತ್ರಿ ಆಗುವ ಸಂದರ್ಭದಲ್ಲಿ ಒಂಡಂಬಡಕೆ ಮಾಡಿಕೊಂಡಿದ್ದರೆ, ಅದರ ಪ್ರಕಾರ ನಡೆದುಕೊಳ್ಳಲಿ ಎಂದು ಶ್ರೀಶೈಲ ಜಗದ್ಗುರುಗಳು ಹೇಳಿದ್ದಾರೆ.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ