ಅಶ್ಲೀಲ ದೃಶ್ಯ ಹಂಚಿಕೆ ಆರೋಪ: ಪ್ರೀತಮ್ ಗೌಡ ಬಂಧಿಸದಂತೆ ಹೈಕೋರ್ಟ್ ಆದೇಶ
ಅಶ್ಲೀಲ ದೃಶ್ಯ ಹಂಚಿಕೆ ಆರೋಪದಲ್ಲಿ ಮಾಜಿ ಶಾಸಕ ಪ್ರೀತಮ್ ಗೌಡ ಬಂಧಿಸದಂತೆ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ. ಆ ಮೂಲಕ ಅವರಿಗೆ ಬಂಧನದಿಂದ ಬಿಗ್ ರಿಲೀಫ್ ಸಿಕ್ಕಿದೆ
ಬೆಂಗಳೂರು, ಜೂನ್ 28: ಅಶ್ಲೀಲ ದೃಶ್ಯ ಹಂಚಿಕೆ ಆರೋಪದಲ್ಲಿ ಮಾಜಿ ಶಾಸಕ ಪ್ರೀತಮ್ ಗೌಡ ಬಂಧಿಸದಂತೆ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ. ಆ ಮೂಲಕ ಅವರಿಗೆ ಬಂಧನದಿಂದ ಬಿಗ್ ರಿಲೀಫ್ ಸಿಕ್ಕಿದೆ. ತನಿಖೆ ಮುಂದುವರಿಸಲು ಎಸ್ಐಟಿಗೆ ತಿಳಿಸಿದ್ದು, ವಿಚಾರಣೆಗೆ ಸಹಕರಿಸಲು ಅರ್ಜಿದಾರ ಪ್ರೀತಮ್ ಗೌಡಗೆ ಹೈಕೋರ್ಟ್ ಸೂಚನೆ ನೀಡಿದೆ.