IND vs SA Final, Barbados Weather Update: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಪಂದ್ಯ ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನಲ್ಲಿ ನಡೆಯಲಿದೆ. ಅದೇ ಹೊತ್ತಿಗೆ ಈ ಪಂದ್ಯದ ಮೇಲೂ ಮಳೆಯ ಛಾಯೆ ಆವರಿಸಿದೆ. weather.com ಪ್ರಕಾರ, ಜೂನ್ 29 ರಂದು ಬಾರ್ಬಡೋಸ್‌ನಲ್ಲಿ ಬೀರುಗಾಳಿ ಮತ್ತು ಭಾರೀ ಮಳೆ ನಿರೀಕ್ಷಿಸಲಾಗಿದೆ. ಪಂದ್ಯದ ವೇಳೆ ಮಳೆ ಬೀಳುವ ಸಾಧ್ಯತೆ ಶೇ.70ರಷ್ಟಿದೆ. ಹೀಗಾಗಿ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವುದು ಖಚಿತವಾಗಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2024 ರ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯ ಬಾರ್ಬಡೋಸ್‌ನಲ್ಲಿ ಜೂನ್ 29 ರಂದು ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ನಡೆಯಲಿದೆ.
ಒಂದೆಡೆ ಟೀಂ ಇಂಡಿಯಾ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿದ್ದರೆ, ಮತ್ತೊಂದೆಡೆ ದಕ್ಷಿಣ ಆಫ್ರಿಕಾ ತಂಡ ಅಫ್ಘಾನಿಸ್ತಾನವನ್ನು ಸೋಲಿಸಿ ಫೈನಲ್‌ಗೆ ತಲುಪಿದೆ. ಇದೀಗ ಈ ಎರಡೂ ತಂಡಗಳು ವಿಶ್ವಕಪ್‌ನ ಫೈನಲ್‌ನಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಲಿವೆ.
ಸೆಮಿಫೈನಲ್ ಪಂದ್ಯಗಳಂತೆಯೇ ಫೈನಲ್ ಪಂದ್ಯದ ಮೇಲೂ ಮಳೆಯ ಛಾಯೆ ಆವರಿಸಿದೆ. ಫೈನಲ್ ಪಂದ್ಯದ ದಿನದಂದು ಬಾರ್ಬಡೋಸ್‌ನಲ್ಲಿನ ಹವಾಮಾನದ ಕುರಿತು ದೊಡ್ಡ ಅಪ್ಡೇಟ್ ಹೊರಬಂದಿದೆ.
ಫೈನಲ್ ಮೇಲೂ ಮಳೆಯ ನೆರಳು
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಪಂದ್ಯ ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನಲ್ಲಿ ನಡೆಯಲಿದೆ. ಅದೇ ಹೊತ್ತಿಗೆ ಈ ಪಂದ್ಯದ ಮೇಲೂ ಮಳೆಯ ಛಾಯೆ ಆವರಿಸಿದೆ. weather.com ಪ್ರಕಾರ, ಜೂನ್ 29 ರಂದು ಬಾರ್ಬಡೋಸ್‌ನಲ್ಲಿ ಬೀರುಗಾಳಿ ಮತ್ತು ಭಾರೀ ಮಳೆ ನಿರೀಕ್ಷಿಸಲಾಗಿದೆ. ಪಂದ್ಯದ ವೇಳೆ ಮಳೆ ಬೀಳುವ ಸಾಧ್ಯತೆ ಶೇ.70ರಷ್ಟಿದೆ. ಹೀಗಾಗಿ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವುದು ಖಚಿತವಾಗಿದೆ.